Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

11/04/2026 9:05 AM

​ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ‘ಕ್ಯಾಶ್’ ನಡೆಯಲ್ಲ! ಸಂಪೂರ್ಣ ಕ್ಯಾಶ್‌ಲೆಸ್ ಆಗಲಿವೆ ರಾಷ್ಟ್ರೀಯ ಹೆದ್ದಾರಿಗಳು: ಸವಾರರೇ ಎಚ್ಚರ!

11/04/2026 8:29 AM

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಬದಲಾವಣೆ: ಇನ್ಮುಂದೆ 26 ದಿನಗಳ ಗ್ಯಾಪ್ ಕಡ್ಡಾಯ! ಯಾವಾಗ ಬುಕ್ ಮಾಡಬೇಕು? ಇಲ್ಲಿದೆ ಮಾಹಿತಿ

11/04/2026 8:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೆ.26ರಂದು ‘KHIR City ಯೋಜನೆ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ: ಸಚಿವ ಎಂ.ಬಿ ಪಾಟೀಲ್
KARNATAKA

ಸೆ.26ರಂದು ‘KHIR City ಯೋಜನೆ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ: ಸಚಿವ ಎಂ.ಬಿ ಪಾಟೀಲ್

By kannadanewsnow0922/09/2024 10:03 PM

ಬೆಂಗಳೂರು: ರಾಜ್ಯ ಸರಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಕೆಎಚ್ಐಆರ್ (ನಾಲೆಡ್ಜ್-ಹೆಲ್ತ್-ಇನ್ನೋವೇಶನ್-ರೀಸರ್ಚ್) ಸಿಟಿಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.26ರಂದು ಚಾಲನೆ ನೀಡಲಿದ್ದಾರೆ. ಇದರ ಅಂಗವಾಗಿ ಅಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಿದ್ದು, ಇದರಲ್ಲಿ ದೇಶ-ವಿದೇಶಗಳ ಗಣ್ಯ ಉದ್ಯಮಿಗಳು, ಶಿಕ್ಷಣ ತಜ್ಞರು, ಸಂಶೋಧಕರು ಮತ್ತು ವೈದ್ಯಕೀಯ ಕ್ಷೇತ್ರದ ಸಾಧಕರು ಭಾಗವಹಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಈ ಬಗ್ಗೆ ಭಾನುವಾರ ಮಾಹಿತಿ ನೀಡಿರುವ ಅವರು, `ಒಟ್ಟು 2,000 ಎಕರೆ ವಿಸ್ತೀರ್ಣದಲ್ಲಿ ಈ ಯೋಜಿತ ನಗರ ಮೈದಾಳಲಿದೆ. ಈ ಪೈಕಿ ಮೊದಲ ಹಂತದಲ್ಲಿ 500 ಎಕರೆಯಲ್ಲಿ ಕೆಎಚ್ಐಆರ್ ಸಿಟಿ ಸಾಕಾರಗೊಳ್ಳಲಿದೆ. 40 ಸಾವಿರ ಕೋಟಿ ರೂ. ಹೂಡಿಕೆಯ ಈ ಯೋಜನೆಯಿಂದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ’ ಎಂದಿದ್ದಾರೆ.

ಸಿಂಗಪುರದ ಬಯೊಪೋಲಿಸ್, ರೀಸರ್ಚ್ ಟ್ರ್ಯಾಂಗಲ್ ಪಾರ್ಕ್, ಸೈನ್ಸ್ ಪಾರ್ಕ್, ಕೆಬಿಐಸಿ, ಅಮೆರಿಕದ ಬೋಸ್ಟನ್ ಇನ್ನೋವೇಶನ್ ಕ್ಲಸ್ಟರ್ ಇದಕ್ಕೆ ಮಾದರಿಯಾಗಿದೆ. ಜತೆಗೆ ಬೆಂಗಳೂರಿನಲ್ಲಿ ಈಗಾಗಲೇ ಅಭಿವೃದ್ಧಿಪಡಿಸಿರುವ ಹೈಟೆಕ್ ಸಿಟಿ, ಎಲೆಕ್ಟ್ರಾನಿಕ್ ಸಿಟಿಯ ಮಾನದಂಡಗಳನ್ನೂ ಇಟ್ಟುಕೊಳ್ಳಲಾಗಿದೆ. ದೊಡ್ಡಬಳ್ಳಾಪುರ- ಡಾಬಸಪೇಟೆ ನಡುವೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 50 ಕಿ.ಮೀ. ದೂರದಲ್ಲಿ ಇದು ಅಸ್ತಿತ್ವಕ್ಕೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.

ಶಿಕ್ಷಣ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆಯೇ ಈ ಪರಿಕಲ್ಪನೆಯ ಆಧಾರಸ್ತಂಭಗಳಾಗಿವೆ. ಜೀವವಿಜ್ಞಾನಗಳು, ಭವಿಷ್ಯದ ಸಂಚಾರ ವ್ಯವಸ್ಥೆ, ಸೆಮಿಕಂಡಕ್ಟರ್, ಅಡ್ವಾನ್ಸ್ಡ್ ಮ್ಯಾನುಫ್ಯಾಕ್ಚರಿಂಗ್ ಮತ್ತು ವೈಮಾಂತರಿಕ್ಷ, ರಕ್ಷಣೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರಗಳಿಗೆ ಇಲ್ಲಿ ಆದ್ಯತೆ ನೀಡಲಾಗುವುದು. ಈ ವಲಯಗಳಿಗೆ ಸಂಬಂಧಿಸಿದ ಜಾಗತಿಕ ಮಟ್ಟದ ಉತ್ಕೃಷ್ಟ ವಿ.ವಿ.ಗಳು, ಸಂಶೋಧನಾಲಯಗಳು, ಆಸ್ಪತ್ರೆಗಳು ಮತ್ತು ಕಂಪನಿಗಳು ಕೆಎಚ್ಐಆರ್ ಸಿಟಿಯಲ್ಲಿ ನೆಲೆಯೂರಿ, ತಮ್ಮ ಚಟುವಟಿಕೆ ಆರಂಭಿಸಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಉದ್ದೇಶಿತ ಕೆಎಚ್ಐಆರ್ ಸಿಟಿಯಲ್ಲಿ ವಿಖ್ಯಾತ ಕಂಪನಿಗಳ ಆರ್ & ಡಿ ಕೇಂದ್ರಗಳು, ಗ್ಲೋಬಲ್ ಕೆಪಾಸಿಟಿ ಸೆಂಟರುಗಳು ಬರಲಿವೆ. ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಡಾ.ದೇವಿಶೆಟ್ಟಿ, ಕಿರಣ್ ಮಜುಂದಾರ್ ಷಾ, ಪ್ರಶಾಂತ ಪ್ರಕಾಶ, ಥಾಮಸ್ ಓಶಾ, ರಾಂಚ್ ಕಿಂಬಾಲ್, ಮೋಹನದಾಸ್ ಪೈ, ನಿಖಿಲ್ ಕಾಮತ್ ಮುಂತಾದ ಖ್ಯಾತನಾಮರನ್ನು ಒಳಗೊಂಡ ಸಲಹಾ ಸಮಿತಿ ರಚಿಸಲಾಗಿದೆ. ಇಲ್ಲಿ ಪ್ರತಿ ಎಕರೆಗೆ 100 ಜನರ ವಸತಿ ಇರುವಂತೆ ನೋಡಿಕೊಳ್ಳುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ಐಐಎಸ್ಸಿ, ನಾಸ್ಕಾಂ ಎಕ್ಸಲೆನ್ಸ್ ಸೆಂಟರ್, ರಾಷ್ಟ್ರೀಯ ವಿನ್ಯಾಸ ಸಂಸ್ಥೆ, ಐಐಟಿ, ಐಐಎಂ, ಸೆಂಟರ್ ಫಾರ್ ಎಐ & ರೋಬೋಟಿಕ್ಸ್, ಸೆಂಟರ್ ಫಾರ್ ನ್ಯಾನೋ & ಸಾಫ್ಟ್ ಮ್ಯಾಟರ್ ಸೈನ್ಸಸ್ ಮುಂತಾದ ಉತ್ಕೃಷ್ಟ ಸಂಸ್ಥೆಗಳಿವೆ. ಜೊತೆಗೆ ಐಟಿ, ಬಿಟಿ, ಔಷಧ ವಿಜ್ಞಾನ, ವೈದ್ಯಕೀಯ ಸಾಧನಗಳ ಉತ್ಪಾದನೆ ಇವುಗಳಲ್ಲಿ ಬೆಂಗಳೂರಿನ ಸಾಧನೆ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಕೆಎಚ್ಐಆರ್ ಸಿಟಿಯಲ್ಲಿ ಜಗತ್ತಿನ ಅಗ್ರಮಾನ್ಯ 500 ಶಿಕ್ಷಣ ಸಂಸ್ಥೆಗಳ ಸ್ಥಳೀಯ ಕ್ಯಾಂಪಸ್ ಬರಲು ಇನ್ನು ಹಾದಿ ಸುಗಮವಾಗಲಿದೆ. ಅಲ್ಲದೆ, ವೈದ್ಯಕೀಯ ಪ್ರವಾಸೋದ್ಯಮ ಇತ್ಯಾದಿಗಳಿಗೂ ಹೇರಳ ಅವಕಾಶ ಸೃಷ್ಟಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

BIG BREAKING: ತಿರುಪತಿ ಲಡ್ಡು ವಿವಾದ: ‘SIT ತನಿಖೆ’ಗೆ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಆದೇಶ | Tirupati Laddu Row

ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ: 945 ಹುದ್ದೆಗಳಿಗೆ ಅರ್ಜಿ ಆಹ್ವಾನ | AO and AAO Jobs Notification 2024

Share. Facebook Twitter LinkedIn WhatsApp Email

Related Posts

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

11/04/2026 9:05 AM2 Mins Read

SHOCKING : ಐಸ್ ಕ್ರೀಮ್ ತಿನ್ನೋ ಮೊದಲು ಎಚ್ಚರ : ಬೆಂಗಳೂರಲ್ಲಿ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ಕಂಡು ಬೆಚ್ಚಿಬಿದ್ದ ಗ್ರಾಹಕ!

11/04/2026 8:20 AM1 Min Read

BIG NEWS : RSS, ಬಿಜೆಪಿಯವರು ಕೆಲವು ಹುಚ್ಚುನಾಯಿಗಳನ್ನು ಸಾಕಿದ್ದಾರೆ : MLC ವಸಂತ್ ಕುಮಾರ್ ವಿವಾದಿತ ಹೇಳಿಕೆ!

11/04/2026 8:16 AM1 Min Read
Recent News

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

11/04/2026 9:05 AM

​ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ‘ಕ್ಯಾಶ್’ ನಡೆಯಲ್ಲ! ಸಂಪೂರ್ಣ ಕ್ಯಾಶ್‌ಲೆಸ್ ಆಗಲಿವೆ ರಾಷ್ಟ್ರೀಯ ಹೆದ್ದಾರಿಗಳು: ಸವಾರರೇ ಎಚ್ಚರ!

11/04/2026 8:29 AM

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಬದಲಾವಣೆ: ಇನ್ಮುಂದೆ 26 ದಿನಗಳ ಗ್ಯಾಪ್ ಕಡ್ಡಾಯ! ಯಾವಾಗ ಬುಕ್ ಮಾಡಬೇಕು? ಇಲ್ಲಿದೆ ಮಾಹಿತಿ

11/04/2026 8:20 AM

SHOCKING : ಐಸ್ ಕ್ರೀಮ್ ತಿನ್ನೋ ಮೊದಲು ಎಚ್ಚರ : ಬೆಂಗಳೂರಲ್ಲಿ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ಕಂಡು ಬೆಚ್ಚಿಬಿದ್ದ ಗ್ರಾಹಕ!

11/04/2026 8:20 AM
State News
KARNATAKA

ALERT : ಪೇಪರ್ ಕಪ್ ನಲ್ಲಿ ಕಾಫಿ,ಟೀ ಕುಡಿಯುವ ಮುನ್ನ ಈ ವಿಡಿಯೋ ನೋಡಿ : ಆರೋಗ್ಯಕ್ಕೆ ಕಾದಿದೆ ದೊಡ್ಡ ಕುತ್ತು | WATCH VIDEO

By kannadanewsnow5711/04/2026 9:05 AM KARNATAKA 2 Mins Read

ಪ್ಲಾಸ್ಟಿಕ್ ಬಳಕೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಇತ್ತೀಚೆಗೆ, ಅನೇಕ ಜನರು ಪ್ಲಾಸ್ಟಿಕ್ ಬದಲಿಗೆ ಪೇಪರ್ ಕಪ್‌ಗಳನ್ನು ಬಳಸುತ್ತಿದ್ದಾರೆ. ಆದರೆ, ಈ ಪೇಪರ್…

SHOCKING : ಐಸ್ ಕ್ರೀಮ್ ತಿನ್ನೋ ಮೊದಲು ಎಚ್ಚರ : ಬೆಂಗಳೂರಲ್ಲಿ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ಕಂಡು ಬೆಚ್ಚಿಬಿದ್ದ ಗ್ರಾಹಕ!

11/04/2026 8:20 AM

BIG NEWS : RSS, ಬಿಜೆಪಿಯವರು ಕೆಲವು ಹುಚ್ಚುನಾಯಿಗಳನ್ನು ಸಾಕಿದ್ದಾರೆ : MLC ವಸಂತ್ ಕುಮಾರ್ ವಿವಾದಿತ ಹೇಳಿಕೆ!

11/04/2026 8:16 AM

ಮಹೇಶ್​ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ : ಮೂರನೇ ಬಾರಿಗೆ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ!

11/04/2026 8:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.