ಬೆಂಗಳೂರು: ನಾಳೆ ಮತ್ತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಸಂಪುಟ ಪುನಾರಚನೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಚರ್ಚೆಯನ್ನು ನಡೆಸಲಿದ್ದಾರೆ ಎನ್ನಲಾಗುತ್ತಿದೆ.
ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೆಹಲಿಗೆ ತೆರಳಿದ್ದಾರೆ. ನಾಳೆ ಮಧ್ಯಾಹ್ನ 1.30ಕ್ಕೆ ದೆಹಲಿಗೆ ಸಿಎಂ ಸಿದ್ಧರಾಮಯ್ಯ ಆಗಮಿಸಲಿದ್ದಾರೆ. ದೆಹಲಿಯ ಕರ್ನಾಟಕ ಭವನಕ್ಕೆ ಸಿಎಂ ಸಿದ್ಧರಾಮಯ್ಯ ಆಗಮಿಸಲಿದ್ದಾರೆ. ಆ ಬಳಿಕ ನಾಳೆ ಮಧ್ಯಾಹ್ನ 3 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿದ್ದಾರೆ.
ದೆಹಲಿಯ ರಾಜಾಜಿ ಮಾರ್ಗದಲ್ಲಿರುವಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಹತ್ವದ ವಿಚಾರಗಳನ್ನು ಸಿಎಂ ಸಿದ್ಧರಾಮಯ್ಯ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.
ಇದಲ್ಲದೇ ನಾಳೆ ಸಂಜೆ 5 ಗಂಟಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ಧರಾಮಯ್ಯ ಭೇಟಿಯಾಗಲಿದ್ದಾರೆ. ಪ್ರಧಾನಿ ಮೋದಿ ಬಳಿಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ, ಬೇಡಿಕೆಗಳ ಬಗ್ಗೆ ಪ್ರಧಾನಿ ಜೊತೆ ಚರ್ಚೆ ನಡೆಸಲಿದ್ದಾರೆ. ಬೆಳೆ ಹಾನಿ ಪರಿಹಾರ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರು ಪ್ರಧಾನಿ ಮೋದಿಯೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
SHOCKING : ನಾಯಿಗೆ ಮುದ್ದು ಮಾಡುವ ನೆಪದಲ್ಲಿ, ಯುವತಿಯ ಮೈ-ಕೈ ಮುಟ್ಟಿ ‘ಲೈಂಗಿಕ ಕಿರುಕುಳ’ ನೀಡಿದ ಕಾಮುಕ!








