ಮೈಸೂರು : ಕಳೆದ ವರ್ಷ ತೀವ್ರ ಬರಗಾಲದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಹಾಗೂ ರೈತರಿಗೆ ಈ ವರ್ಷ ಭಾರಿ ಮಳೆ ಆಗುತ್ತಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ. ಹಳ್ಳಕೊಳ್ಳ ನದಿ ಸೇರಿದಂತೆ ಎಲ್ಲಾ ಡ್ಯಾಮ್ ಗಳು ಭರ್ತಿಯಾಗಿ ತುಂಬಿವೆ. ಇದೀಗ ಕಬಿನಿ ಜಲಾಶಯ ಕೂಡ ತುಂಬಿದ್ದು ಇದೇ ಜುಲೈ 29ರಂದು ಸಿಎಂ ಸಿದ್ದರಾಮಯ್ಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ಹೌದು ಜುಲೈ 29 ರಂದು ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಬಾಗಿನ ಅರ್ಪಿಸಲಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಕಬಿನಿ ಡ್ಯಾಮ್ ಗೆ ಸಿದ್ದರಾಮಯ್ಯ ಬಾಗಿನ ಅರ್ಪಿಸುತ್ತಿದ್ದಾರೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್,ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.