ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಳೆ ಮಣಿಪುರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಲಿರುವಂತ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸಿಎಂ ಸಿದ್ಧರಾಮಯ್ಯ ಅವರು ನಾಳೆ ಬೆಳಿಗ್ಗೆ 9.30ಕ್ಕೆ ಹೆಚ್ಎಎಲ್ ಏರ್ ಪೋರ್ಟ್ ನಿಂದ ವಿಶೇಷ ವಿಮಾನದಲ್ಲಿ ಮಣಿಪುರಕ್ಕೆ ತೆರಳಲಿದ್ದಾರೆ. ಮಣಿಪುರದ ತಿಕೇಂದ್ರಜಿತ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಳಿಗ್ಗೆ 11.50ಕ್ಕೆ ತಲುಪಲಿದ್ದಾರೆ ಎಂದು ತಿಳಿಸಿದೆ.
ಇನ್ನೂ ಇಂಫಾಲ ಏರ್ ಪೋರ್ಟ್ ನಿಂದ 11.55ಕ್ಕೆ ರಸ್ತೆ ಮೂಲಕ ತೆರಳಲಿರೋ ಮುಖ್ಯಮಂತ್ರಿ ಸಿದ್ಧರಾಮಯ್ಯ 12.15ಕ್ಕೆ ಇಂಫಾಲ್ ಸಿಟಿಯನ್ನು ತಲುಪಲಿದ್ದಾರೆ. ಅಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಳ್ಳೋದಾಗಿ ತಿಳಿಸಿದೆ.
ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಂಡ ಬಳಿಕ ಸಂಜೆ 3 ಗಂಟೆಯ ಹಾಗೆ ಇಂಫಾಲ ನಗರಕ್ಕೆ ರಸ್ತೆ ಮೂಲಕ ಸಂಚಾರ ಮಾಡಲಿದ್ದಾರೆ. 3.20ಕ್ಕೆ ಇಂಫಾಲ ಏರ್ ಪೋರ್ಟ್ ತಲುಪಲಿದ್ದಾರೆ. 3.25ಕ್ಕೆ ವಿಶೇಷ ವಿಮಾನದಲ್ಲಿ ಅಲ್ಲಿಂದ ಹೊರಟು, ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ಅನ್ನು ಸಂಜೆ 5.45ಕ್ಕೆ ತಲುಪಲಿದ್ದಾರೆ ಎಂದು ಹೇಳಿದೆ.
‘ಆಸಿಡ್ ಸಂತ್ರಸ್ತ ಮಹಿಳೆ’ಯರ ಗಮನಕ್ಕೆ: ‘2.5 ಲಕ್ಷ’ದವರೆಗೆ ಸಹಾಯಧನ, ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
BREAKING: ‘KSRTC’ ದರ್ಜೆ-03 ‘ತಾಂತ್ರಿಕ ಸಹಾಯಕ ಹುದ್ದೆ’ಯ ‘ಅಂತಿಮ ಆಯ್ಕೆ ಪಟ್ಟಿ’ ಪ್ರಕಟ