BREAKING NEWS: ಮಾರ್ಚ್.7ರಂದು ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ಧರಾಮಯ್ಯ ಘೋಷಣೆ | Karnataka Budget 2025

ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದಂತ ಅವರು ಮಾರ್ಚ್ 7ರಂದು ಬಜೆಟ್ ಮಂಡಿಸಲಿದ್ದೇನೆ. ಮಾರ್ಚ್.3ರಿಂದ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದೆ ಎಂದರು. ಮಾರ್ಚ್.3ರಂದು ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಆ ಬಳಿಕ ಮಾರ್ಚ್.7ರಂದು ರಾಜ್ಯ ಬಜೆಟ್ ಮಂಡಿಸುವುದಾಗಿ ತಿಳಿಸಿದರು.