ಮಡಿಕೇರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್, 02 ರ ಇಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿ ಅವರು ಆಗಸ್ಟ್, 02 ರಂದು ಬೆಳಗ್ಗೆ 11.30 ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲದಲ್ಲಿ ರಸ್ತೆ ಕುಸಿದಿರುವ ಪ್ರದೇಶಕ್ಕೆ ಭೇಟಿ ನೀಡಿ, ವೀಕ್ಷಣೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12.45 ಗಂಟೆಗೆ ವಿರಾಜಪೇಟೆ ತಾಲ್ಲೂಕಿನ ಕೆದಮಳ್ಳೂರು ಗ್ರಾಮದ ಬಳಿ ರಸ್ತೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಲಿದ್ದಾರೆ. ಬಳಿಕ ಮಧ್ಯಾಹ್ನ 1.45 ಗಂಟೆಗೆ ಸಿದ್ದಾಪುರ ಸ್ವರ್ಣಮಾಲ ಕಲ್ಯಾಣ ಮಂಟಪ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ನಂತರ ನಗರದ ಸುದರ್ಶನ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಬಳಿಕ ಸಂಜೆ 4.30 ಗಂಟೆಗೆ ಕುಶಾಲನಗರ ತಾಲ್ಲೂಕಿನ ಮಾದಾಪಟ್ಟಣ ಗ್ರಾಮಕ್ಕೆ ತೆರಳಿ ಮನೆ ಕುಸಿದಿರುವ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಪರ ಕಾರ್ಯದರ್ಶಿ ಕೆ.ಚಿರಂಜೀವಿ ಅವರು ತಿಳಿಸಿದ್ದಾರೆ.