ಬೆಂಗಳೂರು: ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿ, 35ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವಂತ ತಮ್ಮ ಸ್ವಕ್ಷೇತ್ರ ಮೈಸೂರಿನ ಕೆ.ಸಾಲುಂಡಿಗೆ ಸಿಎಂ ಸಿದ್ಧರಾಮಯ್ಯ ನಾಳೆ ಭೇಟಿ ನೀಡಲಿದ್ದಾರೆ.
ಮೈಸೂರಿನ ಕೆ.ಸಾಲುಂಡಿ ಗ್ರಾಮಕ್ಕೆ ಭೇಟಿ ನೀಡಲಿರುವಂತ ಸಿಎಂ ಸಿದ್ಧರಾಮಯ್ಯ, ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದಂತ ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲಿದ್ದಾರೆ.
ಇನ್ನೂ ಮೈಸೂರಿನ ಕೆ.ಸಾಲುಂಡಿ ಗ್ರಾಮದಲ್ಲಿ ಕುಡಿಯುವ ನೀರು ಕಲುಷಿತಗೊಂಡಿದ್ದು ಹೇಗೆ? ಘಟನೆಯ ನಂತ್ರ ಯಾವೆಲ್ಲ ಕ್ರಮವನ್ನು ವಹಿಸಲಾಗಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳಿಂದ ಸಿಎಂ ಸಿದ್ಧರಾಮಯ್ಯ ಪಡೆದುಕೊಳ್ಳಲಿದ್ದಾರೆ.
ಇದೇ ಸಂದರ್ಭದಲ್ಲಿ ಇಂದು ಸಿಲಿಂಡರ್ ನಿಂದ ಅನಿಲ ಸೋರಿಕೆಯಾಗಿ ನಾಲ್ವರು ದುರ್ಮಣಕ್ಕೆ ಈಡಾದಂತ ಮೈಸೂರಿನ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವಾನ ಹೇಳಲಿದ್ದಾರೆ.
ಹತ್ಯೆ, ಆತ್ಮಹತ್ಯೆಗಳೇ ಕಾಂಗ್ರೆಸ್ ಸರಕಾರದ ಸಾಧನೆಯೇ?: ಸಿ.ಟಿ.ರವಿ ಪ್ರಶ್ನೆ
BIG NEWS: ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಎಂದ ‘ರಾಹುಲ್ ಗಾಂಧಿ’ ವಿರುದ್ಧ ‘JDS’ ದೂರು