ಬೆಂಗಳೂರು : ಇಂದಿನಿಂದ ಎರಡು ದಿನಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಮತ್ತು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಬೆಳಗ್ಗೆ 10 ಗಂಟೆಗೆ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ತೆರಳಲಿದ್ದಾರೆ.
ಮೈಸೂರಿನಲ್ಲಿ ನಡೆಯುವ. ಪ್ರಮುಖ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಜಲ ಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.ಮುತ್ತಿನಮುಳಿಸೋಗೆ ಬಳಿ ಕಾವೇರಿ ನದಿಯಿಂದ ನೀರೆತ್ತುವ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳಿಸೋಗೆ ಎಪ್ಪತ್ತು ಗ್ರಾಮಗಳು 150 ಕೆರೆ ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟಿಸಿ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ ಕಾರ್ಯಕ್ರಮ ಮುಗಿಸಿ ಎಂದು ಮೈಸೂರಿನಲ್ಲಿ ತಂಗಲಿದ್ದಾರೆ ಎಂದು ತಿಳಿದುಬಂದಿದೆ.
ನಂತರ ನಾಳೆ ಮೈಸೂರಿನಿಂದ ಹೆಲಿಕ್ಯಾಪ್ಟರ್ ನಲ್ಲಿ ಕೊಡಗು ಜಿಲ್ಲೆಗೆ ಪ್ರಯಾಣಿಸಲಿದ್ದಾರೆ. ಸಿಎಂ ಕಾನೂನು ಸಲಹೆಗಾರ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.ಎಸ್ ಎ ಪೋನನ್ನ ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದು, ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.ನಂತರ ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.