ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಈ ನಡುವೆ ನಾಳೆ ಸಿಎಂ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ಸ್ ಗೆ ಮುಂದಾಗಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಸಿಟಿ ರೌಂಡ್ಸ್ ಕೈಗೊಂಡಿದ್ದು, ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಬಿಬಿಎಂಪಿ, ಬಿಡಬ್ಲುಎಸ್ ಎಸ್ ಬಿ ಹಾಗೂ ಬಿಡಿಎ ಅಧಿಕಾರಿಗಳು ಸಾಥ್ ನೀಡಲಿದ್ದಾರೆ.
ನಿನ್ನೆಯಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್ ಕೈಗೋಂಡಿದ್ದರು. ಡಿಸಿಎಂ ಡಿ.ಕೆ. ಶಿವಕುಮಾರ್ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸಹ ಸಿಟಿ ರೌಂಡ್ಸ್ ಕೈಗೊಂಡಿದ್ದಾರೆ.