ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಂಶ್ವರಿ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅನಾವರಣಗೊಳಿಸಿದರು.
ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ’ ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಅದರಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಪ್ರತಿಮೆಯ ವೈಶಿಷ್ಟ್ಯತೆ
* ನೆಲಮಟ್ಟದಿಂದ ಪ್ರತಿಮೆಯ ಎತ್ತರ – 43 ಅಡಿ 6 ಇಂಚು
* ಪ್ರತಿಮೆಯ ಲೋಹದ ಒಟ್ಟು ತೂಕ – 31.50 ಟನ್
* ಭುವನೇಶ್ವರಿ ಪ್ರತಿಮೆ – 20 ಟನ್
* ಕರ್ನಾಟಕ ನಕ್ಷೆ – 11.50 ಟನ್
* ಭುವನೇಶ್ವರಿ ಪ್ರತಿಮೆಯ ಒಟ್ಟು ವಿಸ್ತೀರ್ಣ (ಉದ್ಯಾನವನ ಸೇರಿದಂತೆ) – 4500 ಚ.ಮೀ
* ಕಲ್ಲು ಕಟ್ಟಡದ ಪೀಠದ ವಿವರ – ಕಲ್ಲಿನ ಹೊಯ್ಸಳ ಶೈಲಿಯ ಪೀಠ ಮತ್ತು ಪ್ರದಕ್ಷಣ ಪಥದ ಸುತ್ತ ಕರ್ಣಕೂಟ ಮತ್ತು ಅಲಂಕಾರಿಕ ಕಲ್ಲಿನ ಕೈಪಿಡಿ ನಿರ್ಮಿಸಲಾಗಿದೆ.
* ಕಾಮಗಾರಿಯ ಅಂದಾಜು ವೆಚ್ಚ : 21.24 ಕೋಟಿ
* ಕಾಮಗಾರಿ ನಿರ್ವಹಣೆ: ಲೋಕೋಪಯೋಗಿ ಇಲಾಖೆ
ಹೊಯ್ಸಳ ಶೈಲೀಯ ಪೀಠ ನಿರ್ಮಾಣ
ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ. ಮುಂಭಾಗದಲ್ಲಿ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ಕರ್ನಾಟಕದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ ಕದಂಬ ಹಾಗೂ ಆಧುನೀಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ ರಾಜಲಾಂಛನಗಳಾದ ಹೊಯ್ಸಳ ಲಾಂಛನ, ವೈಜಯಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇದೆ.
ಪ್ರತಿಮೆಯ ಸುತ್ತಲೂ ಉದ್ಯಾನವನ, ಆವರಣದ ಸುತ್ತಲೂ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಪಶ್ಚಿಮದ ದ್ವಾರಕ್ಕೆ ಇರುವ ನಾಡದೇವಿ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಇದಕ್ಕೆಂದೇ ಪಶ್ಚಿಮಕ್ಕೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶವಿದೆ.
SHOCKING : ಹಾಸ್ಟೆಲ್ ನಲ್ಲಿ `ಲೋ ಬಿಪಿ’ಯಿಂದ ಕುಸಿದು ಬಿದ್ದು 8 ನೇ ತರಗತಿ ವಿದ್ಯಾರ್ಥಿ ಸಾವು.!
BIG NEWS: ತಹಶೀಲ್ದಾರ್-ಎಸಿ ಕೋರ್ಟ್ ಕೇಸ್ ಮುಗಿಸಲು 6 ತಿಂಗಳು ಡೆಡ್ ಲೈನ್: ಸಚಿವ ಕೃಷ್ಣಬೈರೇಗೌಡ