ಬೆಳಗಾವಿ : ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ವರ್ಷದುದ್ದಕ್ಕೂ ಆಯೋಜಿಸಿರುವ ” ಗಾಂಧಿಭಾರತ” ಕಾರ್ಯಕ್ರಮದ ಲಾಂಛನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅನಾವರಣಗೊಳಿಸಿದರು.
ಬೆಳಗಾವಿಯಲ್ಲಿ ಇದೇ ಡಿಸೆಂಬರ್ 26 ಹಾಗೂ 27 ರಂದು ಗಾಂಧಿಭಾರತ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.ಮುಂಬರುವ 2025 ರ ಅಕ್ಟೋಬರ್ 2 ರವರೆಗೆ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. 1924 ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನಕ್ಕೆ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಅಧಿವೇಶನ ಎಂಬ ಹಿರಿಮೆ ಇದೆ. ಈ ಸಂದರ್ಭದಲ್ಲಿ ಗಾಂಧೀಜಿಯವರ ಬದುಕು,ಹೋರಾಟ,ಸ್ವಾತಂತ್ರ್ಯ ಚಳುವಳಿ ಕುರಿತು ಮಕ್ಕಳು, ಯುವಜನರು ಸೇರಿದಂತೆ ಎಲ್ಲಾ ವಯೋಮಾನದ ಜನರಲ್ಲಿ ದೇಶಾಭಿಮಾನ,ಸತ್ಯ,ಅಹಿಂಸೆ,ಆರ್ಥಿಕ ಚಿಂತನೆಗಳು,ಸ್ವರಾಜ್,ಅಸ್ಪೃಶ್ಯತೆ ನಿವಾರಣೆ ಮತ್ತಿತರ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯಕ್ರಮಗಳನ್ನು ಸರ್ಕಾರ ಆಯೋಜಿಸುತ್ತಿದೆ.
ಈ ಸಂದರ್ಭದಲ್ಲಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಕಾನೂನು,ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್,ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರಾದ ಬಸವರಾಜ ರಾಯರೆಡ್ಡಿ,ಚನ್ನರಾಜ ಹಟ್ಟಿಹೊಳಿ,ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ
ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut