Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ನಾಳೆಯಿಂದ `2025-26ನೇ ಸಾಲಿನ ವರ್ಗಾವಣೆ’ ಆರಂಭ | Govt employee Transfer

14/05/2025 12:02 PM

BREAKING : ಪಾಕಿಸ್ತಾನದ ವಶದಲ್ಲಿದ್ದ `BSF’ ಯೋಧ `ಪುರ್ನಾಮ್ ಶಾ’ ರಿಲೀಸ್ : `BSF’ ಅಧಿಕೃತ ಮಾಹಿತಿ

14/05/2025 11:46 AM

BREAKING : ಭಾರತಕ್ಕೆ ಮತ್ತೊಂದು ಜಯ : ಪಾಕ್ ವಶದಲ್ಲಿದ್ದ `BSF’ ಯೋಧ `ಪುರ್ನಾಮ್ ಶಾ’ ಬಿಡುಗಡೆ

14/05/2025 11:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೆ.7ರಂದು ‘ಜಂತರ್ ಮಂತರ್’ನಲ್ಲಿ ಕರ್ನಾಟಕ ರಾಜ್ಯದ ಹಕ್ಕುಗಳ ಪರ ದ್ವನಿ ಎತ್ತಲು ಬನ್ನಿ – ಸಿ.ಎಂ.ಸಿದ್ದರಾಮಯ್ಯ ಕರೆ
KARNATAKA

ಫೆ.7ರಂದು ‘ಜಂತರ್ ಮಂತರ್’ನಲ್ಲಿ ಕರ್ನಾಟಕ ರಾಜ್ಯದ ಹಕ್ಕುಗಳ ಪರ ದ್ವನಿ ಎತ್ತಲು ಬನ್ನಿ – ಸಿ.ಎಂ.ಸಿದ್ದರಾಮಯ್ಯ ಕರೆ

By kannadanewsnow0905/02/2024 3:36 PM

ಬೆಂಗಳೂರು : ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆ ಯಿಂದ ಕಾಯುತ್ತಿದ್ದೆವು. ಕಳೆದ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿ ಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ. ಹೋರಾಟಕ್ಕೆ ಜೊತೆ ನೀಡಲು ಇಡೀ ಸರ್ಕಾರ ಪಕ್ಷ ಭೇದ ಮರೆತು ಆಹ್ವಾನ ನೀಡಿದ್ದೇವೆ. ಕನ್ನಡಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಕೇಂದ್ರದ ಕಿವಿಯನ್ನು ತೆರೆಸಲು ಹೋರಾಡುತ್ತಿದ್ದೇವೆ ಎಂದರು.

ರಾಜ್ಯಕ್ಕೆ ನಿರಂತರ ಅನ್ಯಾಯ

ಭದ್ರಾ ಯೋಜನೆಗೆ 5300 ಕೋಟಿ ಕೊಡುತ್ತೇವೆ ಎಂದು ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ಈವರಗೆ ಒಂದು ರೂ. ಕೂಡ ಬಿಡುಗಡೆ ಮಾಡಿಲ್ಲ. ಬರಗಾಲ ಪರಿಹಾರದ ಹಣವೂ ಇಲ್ಲ. 150 ಮಾನವ ದಿನಗಳಿಗೆ ಕೂಲಿ ಕೊಡಲು ಕೂಡ ಅನುಮತಿ ನೀಡಿಲ್ಲ ಎಂದರು. ಇಂಥ ಹಲವು ಕಾರಣಗಳಿಗಾಗಿ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ದೇಶದ ಜನರ ಗಮನ ಸೆಳೆಯಬೇಕು, ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ, ಹಣಕಾಸು ಹಂಚಿಕೆಯಲ್ಲಾಗಿರುವ ತಾರತಮ್ಯ, ಬರಗಾಲದ ತೋರಿರುವ ಮಲತಾಯಿ ಧೋರಣೆ ಬಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಶಾಸಕರು, ಮೇಲ್ಮನೆ ಶಾಸಕರು ಭಾಗವಹಿಸುತ್ತಿದ್ದಾರೆ ಎಂದರು.

ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ನಷ್ಟ:

ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನದ ಮೂಲಕ ಕೇಂದ್ರ ಮತ್ತು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೇರಿ ಜನರ ಸೇವೆಯನ್ನು ಮಾಡಲು ಒಪ್ಪಿಕೊಂಡಿದ್ದೇವೆ. ಕೇಂದ್ರ ಸರ್ಕಾರದ ತೆರಿಗೆ ಹಣವೆಂದರೆ ರಾಜ್ಯಗಳಿಂದ ಬರುವ ತೆರಿಗೆ ಹಣ , ಸೆಸ್, ಪೆಟ್ರೋಲ್ ಡೀಸೆಲ್, ಸರ್ಚಾರ್ಜ್. ಇವುಗಳಿಂದ ಸಂಗ್ರಹ ವಾಗುವ ಹಣವನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಹಣಕಾಸು ಆಯೋಗ ರಚನೆಯಾಗಿದೆ. ಸಂವಿಧಾನದ 7 ನೇ ಪರಿಚ್ಛೇಧ ಅದನ್ನು ಸ್ವತಂತ್ರ ಸಂಸ್ಥೆಯಾಗಿಸಿದೆ. ಇಲ್ಲಿಯವರೆಗೆ 15 ಹಣಕಾಸು ಆಯೋಗಗಳು ಆಗಿವೆ. ಪ್ರಸ್ತುತ 16 ನೇ ಹಣಕಾಸು ಆಯೋಗ ರಚನೆಯಾಗಿದ್ದು, ಅಧ್ಯಕ್ಷರ ನೇಮಕವಾಗಿದೆ.

14 ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆಯ ಪಾಲು ಶೇ 4.71% ಇದ್ದದ್ದು, 15 ನೇ ಹಣಕಾಸು ಆಯೋಗದಲ್ಲಿ 3.64% ಗೆ ಇಳಿಕೆಯಾಯಿತು. ಅಂದರೆ ಶೇ 1.07% ಕಡಿಮೆಯಾಗಿದೆ. ಅದರಿಂದ 4 ವರ್ಷಗಳಲ್ಲಿ 45,000 ಕೋಟಿ ರೂ. ರಾಜ್ಯಕ್ಕೆ ಕಡಿತ ಆಯಿತು. ಇದು ಕೇವಲ ನಗದು ಹಂಚಿಕೆಯೊಂದರಲ್ಲೇ ಆಗಿರುವ ಅನ್ಯಾಯ. ಅಂದಾಜಿನ ಪ್ರಕಾರ ಈ ವರ್ಷ ನಮ್ಮ ರಾಜ್ಯಕ್ಕೆ ನಗದು ಹಂಚಿಕೆಯಲ್ಲಿ 62098 ಕೋಟಿ ರೂ.ಗಳು ಕರ್ನಾಟಕಕ್ಕೆ ಕಡಿಮೆಯಾಗಲಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ರಾಜ್ಯಕ್ಕೆ 73,593 ಕೋಟಿ ರೂ.ಗಳು ತೆರಿಗೆ ಪಾಲು ಕಡಿಮೆ

ಹಣಕಾಸು ಆಯೋಗ ನಗದು ಹಂಚಿಕೆ ಮಾಡುವಾಗ ಶೇ 4.71 ರಿಂದ ಶೇ 3.74 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು 5495 ಕೋಟಿ ರೂ.ಗಳ ವಿಶೇಷ ಅನುದಾನ ನೀಡಲು ಶಿಫಾರಸ್ಸು ಮಾಡಲಾಗಿತ್ತು. ಮಧ್ಯಂತರ ಬಜೆಟ್ ನಲ್ಲಿ ಈ ಬಗ್ಗೆ ಶಿಫಾರಸ್ಸು ಮಾಡಿದರು. ಈ ಹಣವೂ ರಾಜ್ಯಕ್ಕೆ ಬರಲಿಲ್ಲ.

ಈ ಮೊತ್ತವನ್ನು ಕೇಂದ್ರ ಸರ್ಕಾರವನ್ನು ಕೇಳಿ ಪಡೆಯಲು ವಿಧಾನಸಭೆಯಲ್ಲಿ ವಿಷಯ ಮಂಡಿಸಿದ್ದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದನ್ನು ತಿರಸ್ಕರಿಸಿದರು. ಅಂತಿಮ ವರದಿಯಲ್ಲಿ 3000 ಕೋಟಿ ರೂ. ಫೆರಿಫೆರಲ್ ರಿಂಗ್ ರೋಡಿಗೆ, ಕೆರೆಗಳನ್ನು ಅಭಿವೃದ್ಧಿ ಪಡಿಸಲು 3000 ಸೇರಿ 6000 ಕೋಟಿ ರೂ. ಗಳನ್ನು ಹೆಚ್ವರಿಯಾಗಿ ಕೊಡಲು ಶಿಫಾರಸು ಮಾಡಲಾಯಿತು. ಈ ಹಣವೂ ಬರಲಿಲ್ಲ.

ಮೋದಿ ಅವರು ಪ್ರಧಾನಿ ಆದ ಬಳಿಕ 2020-21 ರಿಂದ 2025-26 ರವೆಗಿನ ಅವಧಿಗೆ ರಚನೆಯಾದ 15 ನೇ ಹಣಕಾಸು ಆಯೋಗದ ತೆರಿಗೆ ಪಾಲು ಹಂಚಿಕೆಯಲ್ಲಿ 62,098 ಕೋಟಿ ರೂ.ಗಳಷ್ಟು ರಾಜ್ಯಕ್ಕೆ ನಷ್ಟವಾಗಿದೆ ಎಂದರು.

ಅಂತೆಯೇ 2020-21 ಹಾಗೂ 2021-22 ನೇ ಸಾಲಿಗೆ ವಿಶೇಷ ಅನುದಾನ ಕೊಡದೆ ರಾಜ್ಯಕ್ಕೆ 11,495 ಕೋಟಿ ರೂ.ಗಳು ನಷ್ಟವಾಗಿದೆ. ಒಟ್ಟಾರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲಿನಲ್ಲಿ 73,593 ಕೋಟಿ ರೂ.ಗಳು ಕಡಿಮೆಯಾಯಿತು ಎಂದರು.

GST ನಲ್ಲಿ ರಾಜ್ಯಕ್ಕೆ ಅನ್ಯಾಯ

GST ಜಾರಿಗೆ ಬಂದಾಗ ಇದು ಅವೈಜ್ಞಾನಿಕ ಎಂದು ನಾವು ಸಾರಿ ಸಾರಿ ಹೇಳಿದೆವು. ಆಗ ರಾಜ್ಯದ ತೆರಿಗೆ ಬೆಳವಣಿಗೆ ದರ 15% ಇತ್ತು. ಇದರಿಂದ ತೆರಿಗೆ, ಕೇಂದ್ರದ ಅನುದಾನವೂ ಹೆಚ್ಚಾಗತ್ತೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಅದನ್ನೂ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ತುಂಬಿ ಕೊಡುವುದಾಗಿ ಕೇಂದ್ರ ಹೇಳಿತ್ತು.‌ ಈ ಪರಿಹಾರ ಜೂನ್ 2022 ಕ್ಕೆ ನಿಲ್ಲಿಸಿದ್ದಾರೆ. ಈಗ ಪರಿಹಾರ ಕೊಡ್ತಾ ಇಲ್ಲ. 5 ವರ್ಷಗಳ ಕಾಲ ಮಾತ್ರ ಪರಿಹಾರ ಕೊಟ್ಟರು. ಇದರಿಂದಾಗಿ ಈಗ ನಮ್ಮ ತೆರಿಗೆ ಬೆಳವಣಿಗೆ 15% ಗೆ ಮತ್ತೆ ತಲುಪಲು ಆಗಲೇ ಇಲ್ಲ. ಹೀಗಾಗಿ ಪರಿಹಾರ ಮುಂದುವರೆಸಿ ಎಂದು ಕೇಳಿದೆವು. ಇವತ್ತಿನವರೆಗೂ ಮುಂದುವರೆಸುವ ಬಗ್ಗೆ ತೀರ್ಮಾನವನ್ನೇ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಈಗಲೂ ನಮಗೆ , ನಮ್ಮ ರಾಜ್ಯಕ್ಕೆ GST ನಲ್ಲಿ ಅನ್ಯಾಯ ಆಗುತ್ತಲೇ ಇದೆ ಎಂದರು.

ರಾಜ್ಯದಿಂದ ನಾವು ಕೊಡುವ 100 ರೂ. ಗಳಲ್ಲಿ 12 ರೂ. ಮಾತ್ರ ನಮಗೆ ವಾಪಾಸ್ ಬರತ್ತೆ. ಉಳಿದದ್ದೆಲ್ಲಾ ಅವರೇ ಇಟ್ಕೊತಾರೆ

ರಾಜ್ಯದಿಂದ ಪ್ರತಿ ವರ್ಷ ಕೇಂದ್ರಕ್ಕೆ 4, 30,000 ಕೋಟಿ ತೆರಿಗೆ ವಸೂಲಿ ಆಗಿ ಹೋಗುತ್ತಿದೆ. ತೆರಿಗೆ ಸಂಗ್ರಹಣೆಯಲ್ಲಿ ಮಹಾರಾಷ್ಟ್ರ ಬಿಟ್ಟರೆ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ನಮಗೆ ಈ ವರ್ಷ ತೆರಿಗೆ ಪಾಲಿನಲ್ಲಿ 37, 252 ಕೋಟಿ ಬರುವುದು. ಕೇಂದ್ರ ಪುರಸ್ಕ್ರುತ ಯೋಜನೆಯಲ್ಲಿ 13,005 ಕೋಟಿ ಎರಡೂ ಸೇರಿ ಕೇವಲ 50,257 ಕೋಟಿ ರಾಜ್ಯಕ್ಕೆ ಬಂದಿದೆ. ರಾಜ್ಯಕ್ಕೆ ಇದು ಭೀಕರ ಅನ್ಯಾಯ ಅಲ್ಲವೇ ಎಂದು ಪ್ರಶ್ನಿಸಿದರು.

ಒಟ್ಟು ಲೆಕ್ಕದಲ್ಲಿ ರಾಜ್ಯದಿಂದ 100 ರೂ. ಕೇಂದ್ರಕ್ಕೆ ಹೋದರೆ ಅದರಲ್ಲಿ ನಮಗೆ 12- 13 ರೂ.ಗಳು ಮಾತ್ರ ವಾಪಾಸ್ ಬರುತ್ತಿದೆ. ಉಳಿದದ್ದು ಕೇಂದ್ರ ಸರ್ಕಾರ ಇಟ್ಟುಕೊಳ್ಳುತ್ತಿದೆ ಎಂದು ಕೇಂದ್ರ ಸರ್ಕಾರವೇ ಒದಗಿಸಿದ ಅಂಕಿ ಅಂಶಗಳನ್ನು ಮುಂದಿಟ್ಟು ವಿವರಿಸಿದರು.

2017-18 ರಲ್ಲಿ ಕೇಂದ್ರದ ಬಜೆಟ್ ಗಾತ್ರ 21,46,735 ಕೋಟಿ ಇತ್ತು. ಆಗ ರಾಜ್ಯಕ್ಕೆ 31908 ಕೋಟಿ, ಗ್ರಾಂಟ್ಸ್ ಹಾಗೂ ನಗದು ಹಂಚಿಕೆ 16072 ಕೋಟಿ,,ಎರಡೂ ಸೇರಿಸಿ 47990 ಕೋಟಿ ಸಿಕ್ಕಿತ್ತು.

2018-19 ರಲ್ಲಿ ಕೇಂದ್ರ ಬಜೆಟ್ ಗಾತ್ರ 24,42,213 ಕೋಟಿಗೆ ವೃದ್ಧಿಸಿತು. ಆಗ ನಗದು ಹಂಚಿಕೆ ಸಿಕ್ಕಿದ್ದು 36215 ಕೋಟಿ. ಇಲ್ಲಿ 2000 ಕೋಟಿ ಕಡಿಮೆ ಆಯಿತು.

2023-24 ಸಾಲಿನಲ್ಲಿ 45,03,097 ಕೋಟಿ ಕೇಂದ್ರ ಬಜೆಟ್ ಆಗಿದ್ದು, ರಾಜ್ಯಕ್ಕೆ 50257 ಕೋಟಿ ಮಾತ್ರ ಸಿಗುವ ಅಂದಾಜಿದೆ. Devolution 2.2 ಯಿಂದ 2024-25 ಕ್ಕೆ 1.23 ಗೆ ಇಳಿದಿದೆ. ಇದರಿಂದಾಗಿ ರಾಜ್ಯಕ್ಕೆ ಆಗುವ ಅನ್ಯಾಯದ ಪ್ರಮಾಣ ಹೆಚ್ಚುತ್ತಲೇ ಇದೆ ಎಂದರು.

ರಾಜ್ಯದ ತೆರಿಗೆಯ ಪಾಲು ದುಪ್ಪಟ್ಟಾಗಬೇಕಿತ್ತು

ಬಜೆಟ್ ಗಾತ್ರ ಡಬಲ್ ಆದಾಗ, ರಾಜ್ಯದ ತೆರಿಗೆಯ ಪಾಲು ದುಪ್ಪಟ್ಟಾಗಬೇಕಿತ್ತು. ಆದರೆ ಈಗ ಅರ್ಧಕ್ಕಿಂತ ಹೆಚ್ಚು ಕಡಿಮೆ ಆಗಿದೆ. ಸೆಸ್, ಸರ್ ಚಾರ್ಜ್ ಪ್ರತೀ ವರ್ಷ ಹೆಚ್ಚಿಸಿಕೊಂಡು ಹೋಗುತ್ತಿದ್ದಾರೆ. ಸರ್, ಸರ್ ಚಾರ್ಜ್ ಮೂಲಕ ಕೇಂದ್ರ ವಸೂಲಿ ಮಾಡುವ ತೆರಿಗೆಯಲ್ಲಿ ರಾಜ್ಯಗಳಿಗೆ ನಯಾ ಪೈಸೆ ವಾಪಾಸ್ ಬರಲ್ಲ. ಆದರೆ ಸೆಸ್, ಸರ್ ಚಾರ್ಜ್ ಎರಡೂ ಕೊಡೋದು ರಾಜ್ಯಗಳೇ.

ಆದ್ದರಿಂದ 16 ನೇ ಹಣಕಾಸು ಆಯೋಗದ ಮುಂದೆ ಸೆಸ್ ಹಾಗೂ ಸರ್ ಚಾರ್ಜ್ ನಲ್ಲೂ ಪಾಲು ಕೊಡಲೇಬೇಕು ಎಂದು ಒತ್ತಾಯಿಸುತ್ತೇವೆ. ಈ ಬಗ್ಗೆ ಗಟ್ಟಿಯಾಗಿ ಧ್ವನಿ ಎತ್ತಲಿದ್ದೇವೆ. ಇದರ ಜತೆಗೆ ಶೇ 1 ರಷ್ಟು ರಕ್ಷಣಾ ಇಲಾಖೆಗೆ ಇಟ್ಟುಕೊಳ್ಳುತ್ತಾರೆ ಎಂದು ವಿವರಿಸಿದರು.

ಹೀಗೆ ಮೋದಿ ಅವರು ಬಂದ ನಂತರ ರಚನೆಯಾದ 15 ನೇ ಹಣಕಾಸು ಆಯೋಗದ ಬಳಿಕ ರಾಜ್ಯಕ್ಕೆ 1,87,867 ಕೋಟಿ ರೂ. ಅನ್ಯಾಯವಾಗಿದೆ ಎಂದು ಲೆಕ್ಕ ಬಿಚ್ಚಿಟ್ಟರು.

ಇಷ್ಟು ದೊಡ್ಡ ಮೊತ್ತ ನಮಗೆ ಬಾರದಿರುವುದು ರಾಜ್ಯಕ್ಕೆ ಆಗಿರುವ ಭಾರೀ ನಷ್ಟವಾಗಿದೆ.

ನೀರಾವರಿ ಯೋಜನೆಗಳಲ್ಲೂ ಭೀಕರ ಅನ್ಯಾಯ ಒತ್ತಾಯ

ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡುತ್ತೇವೆ ಎಂದು ತಿಳಿಸಿದ್ದರು. ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್ ಮಂಡಿಸುವಾಗ ಇದನ್ನೇ ಪುನಃ ನೀರಾವರಿ ಯೋಜನೆಯ ಅನುದಾನ ಎಂದು ಉಲ್ಲೇಖಿಸಿದ್ದರು. 2.5 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸುವ ಯೋಜನೆ ಇದು. ಆದರೆ ಇದುವರೆಗೂ ಒಂದೇ ಒಂದು ರೂ.ಬಂದಿಲ್ಲ . ಈಗಲಾದರೂ ಬಿಡುಗಡೆ ಮಾಡಿ ಎಂದು ನಾನು ಒತ್ತಾಯಿಸುತ್ತೇನೆ ಎಂದರು.

ಮಹದಾಯಿ ಯೋಜನೆಯ ಪರಿಸರ ತೀರುವಳಿ ಇಂದಿನವರೆಗೆ ಆಗಿಲ್ಲ. ಯೋಜನೆ ಪ್ರಾರಂಭಿಸಲು ತೀರುವಳಿ ಕೊಡಿ ಎಂದರೆ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿಲ್ಲ. ಇಂದಿನವರೆಗೆ ಗೆಜೆಟ್ ನೋಟಿಫಿಕೇಶನ್ ಮಾಡಿಕೊಟ್ಟಿಲ್ಲ ಎಂದರು.

ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಇವತ್ತಿನವರೆಗೂ ಅನುಮತಿ ಕೊಟ್ಟಿಲ್ಲ. 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದೆ. 123 ತೀವ್ರ ಬರಗಾಲ ಪೀಡಿತವಾಗಿದ್ದರೂ ಕೇಂದ್ರದಿಂದ ನಯಾಪೈಸೆ ಬಂದಿಲ್ಲ ಎಂದರು.

ಶಬರಿಯಂತೆ ಕಾದರೂ ಪ್ರಯೋಜನವಿಲ್ಲ

ಸೆಪ್ಟೆಂಬರ್ 23 ರಂದು ಕೇಂದ್ರ ತಂಡ ಬಂದು ಬರಗಾಲ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಕೊಟ್ಟಿದೆ. ಬಳಿಕ ಶಬರಿ ಕಾದಂತೆ ನಮ್ಮ ಮಂತ್ರಿಗಳು ಭೇಟಿಗೆ ಕಾದು ವಾಪಾಸ್ ಬಂದಿದ್ದಾರೆ. ಭೇಟಿ ಮಾಡಿದಾಗ ಸಭೆ ಕರೆಯುತ್ತೇನೆ ಎಂದ ಅಮಿತ್ ಶಾ ಇವತ್ತಿನವರೆಗೂ ಸಭೆಯನ್ನೇ ಕರೆದಿಲ್ಲ. ಸಭೆ ಕರೆಯದೆ ಬರ ಪರಿಹಾರ ಬರುವುದೇ ಇಲ್ಲ. ಇವರು ಸಭೆ ಕರೆದೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇವತ್ತಿನವರೆಗೂ ಪ್ರಾಥಮಿಕ ಸಭೆಯನ್ನೇ ಕರೆದಿಲ್ಲ. ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಬಂದಾಗಲೂ ಮನವಿ ಮಾಡಿದ್ದೆ. 35 ಸಾವಿರ ಕೋಟಿ ಬೆಳೆ ನಷ್ಟ ಆಗಿದೆ. ಇದಕ್ಕೆ 17901 ಕೋಟಿ ಪರಿಹಾರವನ್ನು ಕೇಂದ್ರದಿಂದ ಕೇಳಿದ್ದೇವೆ. NDRF ನಿಂದ ನಯಾ ಪೈಸೆ ಬಿಡುಗಡೆ ಮಾಡಿಲ್ಲ. 2019 ರಲ್ಲಿ ಪ್ರವಾಹ ಬಂದಾಗ CM ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ NDRF ಗಾಗಿ ಗೋಗರೆದರೂ ಪರಿಹಾರ ಕೊಡಲಿಲ್ಲ ಎಂದರು.

ಚಿನ್ನದ ಮೊಟ್ಟೆ ಇಡುವ ಕೋಳಿ ಕತ್ತು ಕುಯ್ಯಬಾರದು

ಕೇಂದ್ರ ಸರ್ಕಾರ 2021 ರಲ್ಲಿ ಪ್ರವಾಹ ಬಂದಾಗಲೂ ಅಗತ್ಯ ಹಣ ಕೊಟ್ಟಿಲ್ಲ. ಪರಿಹಾರ ಹಂಚಿಕೆ ಮಾಡುವಾಗ 6 ಮಾನದಂಡಗಳಾದ ಜನಸಂಖ್ಯೆ, ವಿಸ್ತೀರ್ಣ, ವರಮಾನದ ಅಂತರ, ಅರಣ್ಯ ಪ್ರದೇಶ, ತೆರಿಗೆ ಹಣಕಾಸಿನ ಪರಿಸ್ಥಿತಿಗಳನ್ನು ಪರಿಗಣಿಸುತ್ತಾರೆ. ಈ ಮಾನದಂಡಗಳ ಪ್ರಕಾರವೂ ನಮಗೆ ಪರಿಹಾರದ ಹಣ ಬಂದಿಲ್ಲ. ನಮ್ಮ ರಾಜ್ಯಕ್ಕೆ ಅನ್ಯಾಯವಾಗಬಾರದು. ಪತ್ರ ಬರೆದರೆ ಉತ್ತರ ಕೊಡದೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಮಂತ್ರಿಗಳಿಗೆ ಭೇಟಿಗೆ ಅವಕಾಶವಿಲ್ಲದಿರುವುದು, ಬರಗಾಲಕ್ಕೆ ಹಣಕಾಸು ಬಿಡುಗಡೆ ಮಾಡದಿರುವುದು, ಹಂಚಿಕೆಯಲ್ಲಿ ಅನ್ಯಾಯವಾಗಿರುವುದು ನೋಡಿದರೆ ಇದು ಒಕ್ಕೂಟ ವ್ಯವಸ್ಥೆಯ ಅಪಮಾನ ಅಲ್ಲವೇ ಎಂದು ಪ್ರಶ್ನಿಸುತ್ತಿದ್ದೇವೆ. ಉತ್ತರ ರಾಜ್ಯಗಳಿಗೆ ಅನುದಾನ ಕೊಡಬೇಡಿ ಎಂದು ಹೇಳುವುದಿಲ್ಲ. ಆದರೆ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಸರಿಪಡಿಸಿ. ಚಿನ್ನದ ಮೊಟ್ಟೆ ಇಡುವ ಕೋಳಿ ಕತ್ತು ಕುಯ್ಯಬಾರದು, ಹಾಲು ಕೊಡುವ ಕೆಚ್ಚಲನ್ನೇ ಕತ್ತರಿಸಬಾರದು ಎನ್ನುವುದು ನಮ್ಮ ಮನವಿ. ನಮ್ಮ ನಿರಂತರ ಬೇಡಿಕೆ, ಮನವಿಗಳಿಗೂ ಕೇಂದ್ರ ಬೆಲೆ ಕೊಟ್ಟಿಲ್ಲ ಎಂದರು.

ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ರಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ

ಯಡಿಯೂರಪ್ಪ, ಬೊಮ್ಮಾಯಿಯವರು ಪ್ರಧಾನಿಗಳ ಮುಂದೆ ಬಾಯಿ ಬಿಡುವುದಿಲ್ಲ. ವಿರೋಧಪಕ್ಷದ ನಾಯಕ ಆರ್.ಅಶೋಕ್ ಗೆ ಈ ವಿಷಯಗಳೆಲ್ಲಾ ಅರ್ಥವೇ ಆಗಲ್ಲ. ಪ್ರಹ್ಲಾದ್ ಜೋಷಿ ಮತ್ತು ಶೋಭಾ ಕರಂದ್ಲಾಜೆ ರಾಜ್ಯದಿಂದ ಕೇಂದ್ರ ಮಂತ್ರಿಗಳಾಗಿದ್ದಾರೆ. 27 ಜನ ಸಂಸದರು ಸಂಸತ್ತಿನಲ್ಲಿ ಮಾತೇ ಆಡಿಲ್ಲ. ಜನ ಇವರನ್ನು ಆಯ್ಕೆ ಮಾಡಿ ಕಳುಹಿಸಿದರೆ ಕಣ್ಣುಮುಚ್ಚಿ ಕುಳಿತಿದ್ದಾರೆ. ಇವರು ರಾಜ್ಯದ ಪರವಾಗಿ ಪಾರ್ಲಿಮೆಂಟಲ್ಲಿ ಬಾಯಿಯನ್ನೇ ಬಿಡುತ್ತಿಲ್ಲ. 11 ಸಾವಿರ ಕೋಟಿ ಕೇಂದ್ರ ಹಣಕಾಸು ಸಚಿವರಿಂದಲೇ ತಿರಸ್ಕಾರವಾಗಿದೆ. ರಾಜ್ಯದಿಂದ ಆಯ್ಕೆ ಆದ ನಿರ್ಮಲಾ ಸೀತಾರಾಮನ್ ರಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ ಎಂದರು.

ಪ್ರತಿಭಟನೆಗೆ ಪ್ರತಿಪಕ್ಷದವರಿಗೂ ಕರೆ

ಬಿಜೆಪಿ ಶಾಸಕರು, ಸಂಸದರು, ನಾಯಕರಿಗೂ ನಾವು ಪ್ರತಿಭಟನೆಗೆ ಕರೆ ಕೊಡುತ್ತಿದ್ದೇವೆ. ನಾವು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ. ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ. ನೀವೂ ರಾಜ್ಯದ ಜನರ ಧ್ವನಿಯಾಗಿ, ರಾಜ್ಯದ ಜನರ ಪರವಾಗಿ ನಿಲ್ಲಿ ಎಂದು ಬಿಜೆಪಿ ಯವರಿಗೆ ಕರೆ ಕೊಡುತ್ತೇವೆ. ಕನ್ನಡಿಗರಿಗೆ ದ್ರೋಹ ಮಾಡಬೇಡಿ , ಬನ್ನಿ ರಾಜ್ಯದ ಪರವಾಗಿ ಧ್ವನಿ ಎತ್ತೋಣ ಎಂದು ಕರೆಯುತ್ತಿದ್ದೇವೆ. ಪ್ರತಿಭಟಿಸದಿದ್ದರೆ ಕನ್ನಡಿಗರಿಗೆ ದ್ರೋಹ ಉಂಟಾಗಲಿದೆ ಎಂದರು

ಆಶಾಭಾವನೆ ಇದೆ

ಧರಣಿ ಮಾಡಿದರೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಲಿದೆಯೇ ಎಂಬ ಪ್ರಶ್ನೆಗೆ ನರೇಂದ್ರ ಮೋದಿಯವರು ಸೂಕ್ಷ್ಮ ಇದ್ದಾರೆ, ಪ್ರತಿಭಟನೆ ಬಳಿಕವಾದರೂ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿ ಪಡಿಸಿ ಕರ್ನಾಟಕದ ಪಾಲಿನ ಹಣವನ್ನು ವಾಪಾಸ್ ಕೊಡಬಹುದು ಎಂಬ ಆಶಾಭಾವನೆ ಇದೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಹಣ ಹೋಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಟೀಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿ ಇದು ಶುದ್ದ ತಪ್ಪು ಎಂದರು.

ಬರಲಿರುವ ಅಧಿವೇಶನದಲ್ಲಿ ಶ್ವೇತ ಪತ್ರ ಹೊರಡಿಸಲು ರಾಜ್ಯ ಸರ್ಕಾರದ ಚಿಂತನೆ ಸರ್ಕಾರ ನಡೆಸಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯ ಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.

BREAKING: ‘ಜಾರ್ಖಂಡ್ ವಿಧಾನಸಭೆ’ಯಲ್ಲಿ ವಿಶ್ವಾಸಮತ ಗೆದ್ದ ‘ಸಿಎಂ ಚಂಪೈ ಸೊರೆನ್’ | Jharkhand Floor Test

BIG NEWS: ಬಿಜೆಪಿ ಸಂಸದರೆಲ್ಲ ‘ಶೋ ಪೀಸ್’ಗಳು, ಈಗಿರುವ ‘MP’ಗಳು ಯಾರು ಗಂಡಸರಲ್ಲ – ಶಾಸಕ ಹೆಚ್.ಸಿ ಬಾಲಕೃಷ್ಣ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ನಾಳೆಯಿಂದ `2025-26ನೇ ಸಾಲಿನ ವರ್ಗಾವಣೆ’ ಆರಂಭ | Govt employee Transfer

14/05/2025 12:02 PM3 Mins Read

‘ಪ್ರಧಾನಿ ಮೋದಿ ಮನೆ ಮೇಲೆ ಯಾಕೆ ಬಾಂಬ್ ದಾಳಿ ನಡೆಸುತ್ತಿಲ್ಲ’ ಎಂದು ವಿಡಿಯೋ ಮಾಡಿದ್ದ ವ್ಯಕ್ತಿ ಬಂಧನ

14/05/2025 11:14 AM1 Min Read

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಪಾರ್ಟಿ ವೇಳೆ ಗಲಾಟೆಯಾಗಿ ವ್ಯಕ್ತಿಯ ಬರ್ಬರ ಹತ್ಯೆ.!

14/05/2025 11:00 AM1 Min Read
Recent News

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ನಾಳೆಯಿಂದ `2025-26ನೇ ಸಾಲಿನ ವರ್ಗಾವಣೆ’ ಆರಂಭ | Govt employee Transfer

14/05/2025 12:02 PM

BREAKING : ಪಾಕಿಸ್ತಾನದ ವಶದಲ್ಲಿದ್ದ `BSF’ ಯೋಧ `ಪುರ್ನಾಮ್ ಶಾ’ ರಿಲೀಸ್ : `BSF’ ಅಧಿಕೃತ ಮಾಹಿತಿ

14/05/2025 11:46 AM

BREAKING : ಭಾರತಕ್ಕೆ ಮತ್ತೊಂದು ಜಯ : ಪಾಕ್ ವಶದಲ್ಲಿದ್ದ `BSF’ ಯೋಧ `ಪುರ್ನಾಮ್ ಶಾ’ ಬಿಡುಗಡೆ

14/05/2025 11:37 AM

BREAKING : ಭಾರತದಲ್ಲಿ ಚೀನಾದ ಮುಖವಾಣಿ `ಗ್ಲೋಬಲ್ ಟೈಮ್ಸ್‌ನ ಎಕ್ಸ್’ ಖಾತೆ ನಿರ್ಬಂಧ | Global Times X

14/05/2025 11:32 AM
State News
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ನಾಳೆಯಿಂದ `2025-26ನೇ ಸಾಲಿನ ವರ್ಗಾವಣೆ’ ಆರಂಭ | Govt employee Transfer

By kannadanewsnow5714/05/2025 12:02 PM KARNATAKA 3 Mins Read

ಬೆಂಗಳೂರು: 2025-26ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ಮೇ 15 ರ ನಾಳೆಯಿಂದ ಜೂನ್ 14 ರವರೆಗೆ…

‘ಪ್ರಧಾನಿ ಮೋದಿ ಮನೆ ಮೇಲೆ ಯಾಕೆ ಬಾಂಬ್ ದಾಳಿ ನಡೆಸುತ್ತಿಲ್ಲ’ ಎಂದು ವಿಡಿಯೋ ಮಾಡಿದ್ದ ವ್ಯಕ್ತಿ ಬಂಧನ

14/05/2025 11:14 AM

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಪಾರ್ಟಿ ವೇಳೆ ಗಲಾಟೆಯಾಗಿ ವ್ಯಕ್ತಿಯ ಬರ್ಬರ ಹತ್ಯೆ.!

14/05/2025 11:00 AM

BIG NEWS : ನಾಳೆ DCM `ಡಿ.ಕೆ. ಶಿವಕುಮಾರ್’ ಜನ್ಮದಿನ : ಅಭಿಮಾನಿಗಳಿಗೆ ವಿಶೇಷ ಮನವಿ.!

14/05/2025 10:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.