ಮಡಿಕೇರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಭಾಗಮಂಡಲ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಹಾಗಣಪತಿ, ಭಗಂಡೇಶ್ವರ, ಮಹಾವಿಷ್ಣು, ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತ್ರಿವೇಣಿ ಸಂಗಮಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಮಹೇಶ್ ನಾಚಯ್ಯ, ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷರಾದ ಕಾಳನ ರವಿ, ಪ್ರಮುಖರಾದ ಎಚ್.ಎಸ್.ಚಂದ್ರಮೌಳಿ, ಗ್ಯಾರಂಟಿ ಯೋಜನೆ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಪ್ರಮುಖರು ಇದ್ದರು.
ಸಾರ್ವಜನಿಕರ ಗಮನಕ್ಕೆ: ಕೊಡಗು ಜಿಲ್ಲೆಯ ಸಮಗ್ರ ಮಾಹಿತಿಯ ಅಧಿಕೃತ ವೆಬ್ಸೈಟ್ ಬಿಡುಗಡೆ
BREAKING: ನಾಳೆಯ ‘KMF ನೌಕರ’ರ ಮುಷ್ಕರ ಮುಂದೂಡಿಕೆ: ‘ನಂದಿನಿ ಉತ್ಪನ್ನ’ಗಳ ಮಾರಾಟದಲ್ಲಿ ವ್ಯತ್ಯಯವಿಲ್ಲ