ಸವದತ್ತಿ: ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಯಲ್ಲಮ್ಮ ಸನ್ನಿಧಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಇಂದು ಯಲ್ಲಮ್ಮನ ಗುಡ್ಡದಲ್ಲಿ ಸಿಎಂ ಸಿದ್ಧರಾಮಯ್ಯ ಆರತಿ ಆಗುವವರೆಗೂ ಗರ್ಭಗುಡಿಯಲ್ಲೇ ಇದ್ದು ರೇಣುಕಾ ಯಲ್ಲಮ್ಮನ ದರ್ಶನವನ್ನು ಪಡೆದರು. ಆರತಿ ತಟ್ಟೆಗೆ 500 ರೂ ಹಾಕಿದರು. ತಾವೇ ಕುಂಕುಮ ಇಟ್ಟುಕೊಂಡರು. ಈ ಸಂದರ್ಭದಲ್ಲಿ ಅರ್ಚಕರು ಸಿಎಂ ಪತ್ನಿ ಪಾರ್ವತಿ ಹೆಸರಿನಲ್ಲಿ ವಿಶೇಷ ಅರ್ಚನೆಯನ್ನು ಮಾಡಿದರು.
ಬಳಿಕ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆಯನ್ನು ತಮ್ಮದೇ ಅಧ್ಯಕ್ಷತೆಯಲ್ಲಿ ನಡೆಸಿದರು.
ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕ್ಷೇತ್ರದ ಶಾಸಕರಾದ ವಿಶ್ವಾಸ್ ವ ವೈದ್ಯ ಮತ್ತು ಜಿಲ್ಲೆಯ ಶಾಸಕರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿರುವ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ
BREAKING : ರಾಜ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ವಿಚಾರ : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ