ಬೆಂಗಳೂರು: ವರ್ಗಾವಣೆಗೆ ಪ್ರಭಾವ ಬೀರುವವರ ವಿರುದ್ಧ, ಹಣ ಕೊಟ್ಟು ಟ್ರಾನ್ಸ್ ಫರ್ ಗೆ ಪ್ರಯತ್ನಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ. ನಿಮಗೆ ಸಮಸ್ಯೆಗಳಿದ್ದರೆ ಗೃಹ ಸಚಿವರಿಗೆ, ಪೊಲೀಸ್ ಮಹಾ ನಿರ್ದೇಶಕರಿಗೆ ತಿಳಿಸಿ ಸರಿಪಡಿಸಿಕೊಳ್ಳಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಾನೂನು ಮೀರಿ ಕೆಲಸ ಮಾಡಿ ಎಂದು ಸರ್ಕಾರ ಯಾವತ್ತೂ ಬಯಸಲ್ಲ. ಕಾನೂನು ಪ್ರಕಾರ ಕೆಲಸ ಮಾಡದಿದ್ದರೆ ಸರ್ಕಾರ ಸಹಿಸಲ್ಲ ಎಂಬುದಾಗಿ ಗರಂ ಆಗೇ ನುಡಿದರು.
ಜನರ ನಡುವೆ ಪೊಲೀಸರು, ಅಧಿಕಾರಿಗಳು ಸಮವಸ್ತ್ರದಲ್ಲಿ ಹೆಚ್ಚೆಚ್ಚು ಕಾಣಿಸಬೇಕು. ಇದು ಜನ ಸಾಮಾನ್ಯರಿಗೆ ಧೈರ್ಯ ತಂದುಕೊಡುತ್ತದೆ. ಪೊಲೀಸರು ಹೆಚ್ಚೆಚ್ಚು ಜನಸಂಪರ್ಕ ಸಭೆಗಳನ್ನು ಹೆಚ್ಚೆಚ್ಚು ಪರಿಣಾಮಕಾರಿಯಾಗಿ ನಡೆಸಬೇಕು. DG-IGP ಯಿಂದ SP ಗಳವರೆಗೂ ಪ್ರತಿಯೊಬ್ಬರೂ ಠಾಣೆಗಳಿಗೆ ಭೇಟಿ ನೀಡಿ ಸರಿಯಾದ ಕ್ರಮದಲ್ಲಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮತ್ತೊಮ್ಮೆ ಒತ್ತಿ ಹೇಳಿ ಸಿಎಂ ಮಾತು ಮುಗಿಸಿದರು.
ಅಸ್ಸಾಂ ಪ್ರವಾಹ ಪರಿಸ್ಥಿತಿ ಗಂಭೀರ, 30 ಜಿಲ್ಲೆಗಳಲ್ಲಿ 24.50 ಲಕ್ಷ ಜನರಿಗೆ ತೊಂದರೆ