ಬೆಂಗಳೂರು : ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ವಿಧಾನ ಪರಿಷತ್ ಸದಸ್ಯೆ, ಹಿರಿಯ ನಟಿ ಉಮಾಶ್ರೀ ಅವರ ಏಕ ವ್ಯಕ್ತಿ ಅಭಿನಯದ “ಶರ್ಮಿಷ್ಠೆ” ನಾಟಕ ವೀಕ್ಷಿಸಿದ್ದಾರೆ.
ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ಜನಸೇವೆ ಮಾಡುವ ಜೊತೆಗೆ ಆಗಾಗ್ಗೆ ಧಾರವಾಹಿ, ಚಲನಚಿತ್ರ, ನಾಟಕಗಳಲ್ಲಿ ಅಭಿನಯಿಸುತ್ತಾ ಕಲಾಸೇವೆ ಮಾಡುವ ಉಮಾಶ್ರೀ ಅವರು ನಾಡಿನ ಹೆಮ್ಮೆಯ ಕಲಾವಿದೆ.ಇಂದಿನ ಶರ್ಮಿಷ್ಠೆ ನಾಟಕದಲ್ಲಿ ಅವರ ಅಭಿಯನ ಮನೋಜ್ಞವಾಗಿತ್ತು. ಕಲಾಸರಸ್ವತಿಯ ಒಲವು ಅವರ ಮೇಲಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಜನಸೇವೆಯ ಜೊತೆಗೆ ಕಲಾಸೇವೆಯ ಅವರ ಕಾರ್ಯ ಯಾವ ಅಡೆತಡೆಗಳಿಲ್ಲದೆ ಸಾಗಲಿ ಎಂದು ಹಾರೈಸಿದ್ದಾರೆ.
ಬೇಲೂರು ರಘುನಂದನ್ ಅವರ ಈ ನಾಟಕಕ್ಕೆ ಚಿದಂಬರರಾವ್ ಜಂಬೆ ವಿನ್ಯಾಸ, ನಿರ್ದೇಶನವಿದೆ. ಅನೂಪ್ ಶೆಟ್ಟಿ ಸಂಗೀತ ವಿನ್ಯಾಸ, ಶಿವಲಿಂಗ ಪ್ರಸಾದ್ ಸಂಗೀತ ನಿರ್ವಹಣೆ, ಪ್ರಮೋದ್ ಶಿಗ್ಗಾಂವ್ ರಂಗಸಜ್ಜಿಕೆ, ವಸ್ತ್ರವಿನ್ಯಾಸವಿದೆ. ಕನ್ನಡ ರಂಗಭೂಮಿ, ಕಿರುತೆರೆ, ಬೆಳ್ಳಿತೆರೆ ಕ್ಷೇತ್ರದ ಅಭಿಜಾತ ಕಲಾವಿದೆ ಉಮಾಶ್ರೀ ಅವರು 4 ದಶಕಕ್ಕೂ ಹೆಚ್ಚು ಕಾಲದಿಂದ ಕನ್ನಡ ರಂಗಭೂಮಿ ಕ್ಷೇತ್ರದಲ್ಲಿ ಅನುಪಮವಾದ ಸೇವೆ ಸಲ್ಲಿಸುತ್ತಿರುವ ಉಮಾಶ್ರೀ ಅವರು ಭಾರತೀಯ ಅಭಿನಯ ಪರಂಪರೆಯಲ್ಲಿ ಒಂದು ಅಮೂಲ್ಯ ಮಾದರಿ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ವಿಧಾನ ಪರಿಷತ್ ಸದಸ್ಯೆ, ಹಿರಿಯ ನಟಿ ಉಮಾಶ್ರೀ ಅವರ ಏಕ ವ್ಯಕ್ತಿ ಅಭಿನಯದ "ಶರ್ಮಿಷ್ಠೆ" ನಾಟಕ ವೀಕ್ಷಿಸಿದೆ.
ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ಜನಸೇವೆ ಮಾಡುವ ಜೊತೆಗೆ ಆಗಾಗ್ಗೆ ಧಾರವಾಹಿ, ಚಲನಚಿತ್ರ, ನಾಟಕಗಳಲ್ಲಿ ಅಭಿನಯಿಸುತ್ತಾ ಕಲಾಸೇವೆ ಮಾಡುವ ಉಮಾಶ್ರೀ ಅವರು ನಾಡಿನ ಹೆಮ್ಮೆಯ ಕಲಾವಿದೆ.… pic.twitter.com/pxyZ6dRBQz
— Siddaramaiah (@siddaramaiah) August 22, 2025