ಮಂಡ್ಯ : ಮಂಡ್ಯದ ಮದ್ದೂರಿಗೆ ಆಗಮಿಸಿದ ಇದೀಗ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸಿದ್ದು, ಮದ್ದೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮ ಹಿನ್ನೆಲೆ ಮದ್ದೂರು ಪಟ್ಟಣದ ಹೊರ ವಲಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.
ಕಾರ್ಯಕ್ರಮಕ್ಕೂ ಮುನ್ನ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ ಉದ್ಘಾಟನೆ ನೆರವೇರಿಸಲಾಯಿತು ಶಾಸಕ ಕದಲೂರು ಉದಯ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಸಿಎಂಗೆ ಡಿಸಿಎಂ ಡಿಕೆಶಿ, ಸಚಿವರಾದ ಚಲುವರಾಯಸ್ವಾಮಿ, ಮತ್ತಿತರರ ಸಾಥ್ ನೀಡಿದರು.
ಸಿಎಂ, ಡಿಸಿಎಂಗೆ ಬೃಹತ್ ಬೆಲ್ಲ ಹಾಗೂ ಕಬ್ಬಿನ ಹಾರ ಹಾಕುವ ಮೂಲಕ ಸ್ವಾಗತ
ಇದೆ ವೇಳೆ ಅಭಿಮಾನಿಗಳು ಕ್ರೇನ್ ಮೂಲಕ ಬೆಲ್ಲ ಹಾಗೂ ಬೆಲ್ಲದ ಹಾರ ಹಾಕುವ ಮೂಲಕ ಸಿಎಂ ಡಿಸಿಎಂ ಗೆ ಸ್ವಾಗತ ಕೋರಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಮದ್ದೂರಿನ ಹೊರವಲಯದಲ್ಲಿ ಈ ಒಂದು ಬೃಹತ್ ಕಾರ್ಯಕ್ರಮ ನಡೆಯುತ್ತಿದೆ. ಸುಮಾರು 1,147 ಕೋಟಿ ರೂ. ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ.
16 ಇಲಾಖೆಗಳ 88 ಅಭಿವೃದ್ಧಿ ಕಾಮಗಾರಿ. ಬೃಹತ್ ಕಾರ್ಯಕ್ರಮದಲ್ಲಿ ಸುಮಾರು 20 ಸಾವಿರ ಜನರು ಭಾಗಿಯಾಗಲಿದ್ದಾರೆ. ಇದೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಜನರಿಂದ ಅಹವಾಲು ಸ್ವೀಕರಿಸಿದರು. ರೈತರು, ವಿವಿಧ ಸಂಘಟನೆಗಳು, ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿದರು. ಅಹವಾಲು ಸ್ವೀಕರಿಸಿ ಸಿಎಂ, ಡಿಸಿಎಂ, ಸಚಿವರು, ಶಾಸಕರು ಸೇರಿದಂತೆ ಕಾಂಗ್ರೆಸ್ ಮುಖಂಡರು ವೇದಿಕೆಯತ್ತ ತೆರಳಿದರು.