ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ: ಆರ್.ಅಶೋಕ್ ಕಿಡಿ

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತು ಕಾಂಗ್ರೆಸ್‌ ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ಅಭಿವೃದ್ಧಿ ಕೆಲಸ ಮಾಡಲು ಯಾರೂ ಮುಂದಾಗುತ್ತಿಲ್ಲ. … Continue reading ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ: ಆರ್.ಅಶೋಕ್ ಕಿಡಿ