ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಭೀಮಾ ತೀರದಲ್ಲಿ ಭಾರೀ ಮಳೆಯ ಕಾರಣ ಪ್ರವಾಹ ಉಂಟಾಗಿದೆ. ಈ ಭೀಮಾ ತೀರದ ಜಿಲ್ಲೆಗಳಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿ, ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿದರು.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಕಲಬುರ್ಗಿ ವಿಮಾನ ನಿಲ್ದಾಣದಲ್ಲಿಯೇ ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಪ್ರಾಥಮಿಕ ಸಭೆ ನಡೆಸಿ, ವಿವರವಾದ ಮಾಹಿತಿ ಪಡೆದರು.
https://twitter.com/CMofKarnataka/status/1972935321676566784
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು.
ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು ವಿವರಗಳನ್ನು ನೀಡಿದರು.
ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿ ಮೊದಲ ಸುತ್ತಿನ ವೈಮಾನಿಕ ಸಮೀಕ್ಷೆ ನಡೆಸಿದರು. ಇದಾದ ಬಳಿಕ ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.
ರಾಜ್ಯದಲ್ಲಿ ಸಮೀಕ್ಷೆ ಹೆಸರಲ್ಲಿ ಸಮಾಜಗಳಲ್ಲಿ ಸಂಘರ್ಷ ಸೃಷ್ಟಿಸಿ ದುರ್ಲಾಭ ಪಡೆಯುವ ಹುನ್ನಾರ: ಬೊಮ್ಮಾಯಿ ಆರೋಪ