ಮಂಡ್ಯ : ಜು. 28 ರಂದು ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ 1200 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಪೂರ್ಣಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ನೆರೆವೇರಿಸಲಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಸೋಮನಹಳ್ಳಿಯ ತಿಮ್ಮದಾಸ್ ಹೋಟೆಲ್ ಸಮೀಪ ಸಾಧನ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಶಾಸಕ ಕೆ.ಎಂ.ಉದಯ್ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತದ ಅಧಿಕಾರಿಗಳೊಂದಿಗೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.
ಇದೇ ವೇಳೆ ಶಾಸಕ ಕೆ.ಎಂ.ಉದಯ್ ಮಾತನಾಡಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 1200 ರೂ. ಕೋಟಿಗೂ ಅಧಿಕ ಅನುದಾನ ನೀಡಿರುವುದರಿಂದ ಕ್ಷೇತ್ರದ ಜನರ ಪರವಾಗಿ ಅಭಿನಂದನೆ ಸಲ್ಲಿಸಲಾಗುವುದು ಎಂದರು.
ಸಾಧನ ಸಮಾವೇಶವನ್ನು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಶೀಘ್ರವಾಗಿ ಕಾರ್ಯಕ್ರಮದ ಸಂಬಂಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಮಾವೇಶದ ರೂಪುರೇಷ ರೂಪಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ಸಚಿವರು, ಜಿಲ್ಲೆಯ ಶಾಸಕರು, ನಿಗಮ, ಮಂಡಳಿ ಅಧ್ಯಕ್ಷರು ಸೇರಿದಂತೆ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಕೃಷ್ಣಪ್ಪ, ಉಪ ವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಸೀಲ್ದಾರ್ ಡಾ.ಸ್ಮಿತಾರಾಮು, ಪುರಸಭಾಧ್ಯಕ್ಷೆ ಕೋಕಿಲ ಅರುಣ್, ಮುಖ್ಯಾಧಿಕಾರಿ ಮೀನಾಕ್ಷಿ. ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್ ಮುಲ್ ನಿರ್ದೇಶಕ ಹರೀಶ್ ಬಾಬು, ತಿಮ್ಮದಾಸ್ ಗ್ರೂಪ್ ಮಾಲೀಕ ಸಿ.ಟಿ.ಶಂಕರ್, ಕಾಂಗ್ರೆಸ್ ಮುಖಂಡ ಕೆ.ಎಂ.ರವಿ ಸೇರಿದಂತೆ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ: ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ
BIG NEWS: ಇನ್ಮುಂದೆ ದೇಶಾದ್ಯಂತ ‘BIS ಪ್ರಮಾಣೀಕೃತ ಹೆಲ್ಮೆಟ್’ ಧರಿಸುವುದು ಕಡ್ಡಾಯ: ಕೇಂದ್ರ ಸರ್ಕಾರ