ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ

ಮಂಡ್ಯ : ಜು. 28 ರಂದು ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ 1200 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಪೂರ್ಣಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ನೆರೆವೇರಿಸಲಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಸೋಮನಹಳ್ಳಿಯ ತಿಮ್ಮದಾಸ್ ಹೋಟೆಲ್ ಸಮೀಪ ಸಾಧನ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಶಾಸಕ ಕೆ.ಎಂ.ಉದಯ್ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತದ ಅಧಿಕಾರಿಗಳೊಂದಿಗೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು. … Continue reading ಜು.28 ರಂದು ಮದ್ದೂರಿಗೆ ಸಿಎಂ ಸಿದ್ದರಾಮಯ್ಯ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ