ಬೆಂಗಳೂರು: ಸಿಟಿ ರೌಂಡ್ಸ್ ಗೆ ಬಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬೆಂಗಳೂರು ನಗರವಾಸಿಗಳು ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಯಶಸ್ವೀ ಜಾರಿ ಬಗ್ಗೆ ಅಭಿನಂದನೆಗಳ ಮಹಾಪೂರವನ್ನೇ ಹರಿಸಿದರು.
ಸಮಸ್ಯೆಗಳನ್ನು ಆಲಿಸುತ್ತ ಸಿಎಂ ಗೆ ಸಾರ್ವಜನಿಕರು ಮುಗಿಬಿದ್ದು ಗ್ಯಾರಂಟಿ ಯೋಜನೆಗಳಿಂದ ತಮ್ಮ ಕುಟುಂಬಗಳಿಗೆ ಆಗಿರುವ ಅನುಕೂಲಗಳನ್ನು ವಿವರಿಸಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನ ಸಿಲ್ಕ್ ಬೋರ್ಟ್ ನಲ್ಲಿ ಮಟ್ರೋ ಕಾಮಗಾರಿಯಿಂದಾಗಿ ಮಳೆನೀರು ಚರಂಡಿ ವಿಸ್ತೀರ್ಣ ಕಡಿಮೆಯಾಗಿ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ ಎನ್ನುವ ಸಾರ್ವಜನಿಕರ ಬಗ್ಗೆ ಪರಿಶೀಲನೆ ನಡೆಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಪರಿಹಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು 4.5 ಕೋಟಿ ಕಾಮಗಾರಿ ಅಗತ್ಯವಿದೆ ಹಾಗೂ ಸರ್ಕಾರದ ಉನ್ನತಾಧಿಕಾರ ಸಮಿತಿಯ ಅನುಮತಿ ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿವರಿಸಿದರು. ಪರ್ಯಾಯ ವ್ಯವಸ್ಥೆಯ ಕಾಮಗಾರಿ ಕೈಗೊಳ್ಳಲು ಸಮ್ಮತಿಸಿದ ಮುಖ್ಯಮಂತ್ರಿಗಳು ಮುಂದಿನ ಉನ್ನತಾಧಿಕಾರ ಸಮಿತಿ ಸಭೆಯ ಮುಂದೆ ಮಂಡಿಸಲು ಸೂಚಿಸಿದರು. ಜೊತೆಗೆ ಈ ಯೋಜನೆಯನ್ನು ಮುಂದಿನ 10-15 ವರ್ಷಗಳ ಪರಿಣಾಮವನ್ನು ಗಮನದಲ್ಲಿರಿಸಿಕೊಂಡು ಕ್ರಿಯಾ ಯೋಜನೆ ರೂಪಿಸಲು ಸೂಚಿಸಿದರು. ಹೆಚ್ಚುವರಿ ಅನುದಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಆಹಾರ ಪ್ರಾಧಿಕಾರದ ಪರೀಕ್ಷೆಗಳಲ್ಲಿ ‘MDH, ಎವರೆಸ್ಟ್ ಮಸಾಲೆ ಮಾದರಿ’ಗಳು ಉತ್ತೀರ್ಣ : ಮೂಲಗಳು
BIG NEWS: ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಎಂದ ‘ರಾಹುಲ್ ಗಾಂಧಿ’ ವಿರುದ್ಧ ‘JDS’ ದೂರು