Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

BIG NEWS : ಆರ್‌ಸಿಬಿ ವಿಜಯೋತ್ಸವ ವೇಳೆ ಹುಚ್ಚಾಟ : ಒಂದೇ ರಾತ್ರಿ 260 ಡ್ರಿಂಕ್ & ಡ್ರೈವ್‌ ಕೇಸ್ ದಾಖಲು!

BIG NEWS : ಅಪ್ರಾಪ್ತ ಮಕ್ಕಳನ್ನು `ಸೆಕ್ಸ್ ಟ್ರಾಫಿಕಿಂಗ್’ ದಂಧೆಗೆ ತಳ್ಳುವ ಆರೋಪಿಗಳ ವಿರುದ್ಧ `ಪೋಕ್ಸೋ ಕೇಸ್’ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳಿಗೆ CM ಸಿದ್ಧರಾಮಯ್ಯ ಗುಡ್ ನ್ಯೂಸ್ : ಶೀಘ್ರವೇ 500 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿ.!
KARNATAKA

ಉದ್ಯೋಗಾಕಾಂಕ್ಷಿಗಳಿಗೆ CM ಸಿದ್ಧರಾಮಯ್ಯ ಗುಡ್ ನ್ಯೂಸ್ : ಶೀಘ್ರವೇ 500 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿ.!

By kannadanewsnow57

ಬೆಂಗಳೂರು: ಒಟ್ಟು 9834 ಗ್ರಾಮ ಆಡಳಿತಾಧಿಕಾರಿಗಳಿದ್ದು, 8003 ಜನ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಹೊಸದಾಗಿ ಒಂದು ಸಾವಿರ ಜನ ಸೇರ್ಪಡೆಯಾಗುತ್ತಿದ್ದು, ಇನ್ನೂ 500 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

9,834 ಗ್ರಾಮ ಆಡಳಿತಾಧಿಕಾರಿಗಳ ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್‌ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4 ಕ್ರೋಮ್‌ಬುಕ್‌ಗಳನ್ನು ಈಗ ನೀಡಲಾಗುತ್ತಿದೆ. ಹಂತಹಂತವಾಗಿ ಯಾವುದೇ ಗ್ರಾಮಾಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಅವರು ಮಂಗಳವಾರದಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.

ಹಿಂದೆ 94-95 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ್ದು, ಆಯ್ಕೆಯಾಗಿರುವವರು ಪುಣ್ಯವಂತರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದೀರಿ. 9834 ಒಟ್ಟು ಗ್ರಾಮ ಆಡಳಿತಾಧಿಕಾಗಳಿದ್ದು, ಅದರಲ್ಲಿ 8003 ಜನ ಕಾರ್ಯನಿರ್ವಹಿಸುತ್ತಿದ್ದಾರೆ.ಈಗ 1000 ಜನ ಸೇರ್ಪಡೆಯಾಗುತ್ತಿದ್ದಾರೆ. ಯಾವುದೇ ಗ್ರಾಮ ಆಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಅಲ್ಲೇ ಇದ್ದು ಸಾಧ್ಯವಾದಷ್ಟು ಮಟ್ಟಿಗೆ ಗ್ರಾಮಗಳಲ್ಲಿಯೇ ವಾಸ ಮಾಡುವುದು ಉತ್ತಮ ಎಂದರು.

ದಾಖಲೆಗಳನ್ನು ಕರಾರುವಾಕ್ಕಾಗಿಡುವುದು ಅವಶ್ಯಕ

ನಮ್ಮ ದೇಶ ಗ್ರಾಮಗಳ ದೇಶ. ಕೃಷಿ ಪ್ರಮುಖವಾದ ಉದ್ಯೋಗವಾಗಿದ್ದು, ಹೆಚ್ಚು ಶೇ 60 ಕ್ಕೂ ಹೆಚ್ಚು ಜನ ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಜಮೀನುಗಳ ಲೆಕ್ಕ ಇಡುವುದು ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿ. ಹಳ್ಳಿಗಳಲ್ಲಿ ಶಾಂತಿ, ನೆಮ್ಮದಿ ನೆಲೆಸಲು ದಾಖಲಾತಿಗಳು ಸರಿಯಾಗಿರಬೇಕು. ದಾಖಲೆಗಳನ್ನು ಬಹಳ ಕರಾರುವಾಕ್ಕಾಗಿ ಇಡುವುದು ಅವಶ್ಯಕ. ಆಧುನಿಕ ನಾಡಿನಲ್ಲಿ ತಂತ್ರಜ್ಞಾನ, ವಿಜ್ಞಾನ ಬೆಳೆದಿದೆ. ಈಗ ಪ್ರತಿಯೊಂದೂ ಡಿಜಿಟಲೀಕರಣವಾಗಿದೆ. ಆನ್ ಲೈನ್ ನಲ್ಲಿ ದಾಖಲಾತಿಗಳನ್ನು ಪಡೆಯುವ ವ್ಯವಸ್ಥೆ ಬಂದ ನಂತರ ನಾವು ಯಾವುದೇ ಕಾರಣಕ್ಕೂ ತಪ್ಪುಗಳಿಗೆ ಅವಕಾಶ ನೀಡಬಾರದು. ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿ ಬಹಳ ಮಹತ್ವದ್ದು. ರೈತರಿಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಹತ್ತಿರದ ಸಂಬಂಧವಿದ್ದು, ಪ್ರತಿಯೊಬ್ಬ ರೈತರ ಪರಿಚಯ ಅವರಿಗಿರುತ್ತದೆ. ಅವರ ಭೂಮಿಯ ಕುರಿತು ಮಾಹಿತಿ ಗೊತ್ತಿರುತ್ತದೆ. ಅವರ ಪರಿಚಯವಿಟ್ಟುಕೊಂಡು ಅಗತ್ಯ ದಾಖಲಾತಿಗಳನ್ನು ಒದಗಿಸುವುದು ನಿಮ್ಮ ಕೆಲಸ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ಗ್ರಾಮ ಆಡಳಿತಾಧಿಕಾರಿಗಳು ಉತ್ತಮ ನಡತೆ, ಸಂಪರ್ಕವನ್ನು ಹೊಂದಿದ್ದರೆ ರೈತರು ನಿಮ್ಮ ಮಾತನ್ನು ಕೇಳುತ್ತಾರೆ. ಗ್ರಾಮ ಆಡಳಿತಾಧಿಕಾರಿಗಳು ಒಳ್ಳೆ ರೀತಿಯ ಕೆಲಸ ಮಾಡಿಕೊಟ್ಟರೆ ಅವರ ಮೇಲೂ ಗೌರವ ವಿರುತ್ತದೆ. ಜನರ ಕೆಲಸ ದೇವರ ಕೆಲಸ ಎಂದು ನೆನೆಪಿಟ್ಟುಕೊಳ್ಳಬೇಕು. ನಾವಿರುವುದೇ ಜನರ ಸೇವೆಗಾಗಿ ಎನ್ನುವುದನ್ನು ಮರೆಯಬಾರದು. ಆರು ಲಕ್ಷ ಜನ ಸರ್ಕಾರಿ ನೌಕರರು ಅವರಿಗಾಗಿಯೇ ಇರುವುದು. ರಾಜಕಾರಣಿಗಳು, ಜನರಿಂದ ಆಯ್ಕೆಯಾದರೆ, ಸರ್ಕಾರದಿಂದ ಆಯ್ಕೆಯಾದ ಸರ್ಕಾರಿ ನೌಕರರು ಜನಸೇವೆಯನ್ನು ಅವರ ಧ್ಯೇಯವಾಗಿಸಬೇಕು.

ಕಂದಾಯ ಇಲಾಖೆಯದ್ದು ಅತ್ಯಂತ ಜವಾಬ್ದಾರಿಯುತ ಕೆಲಸ. ಇಲ್ಲಿ ಸುಧಾರಣೆಗಳನ್ನು ತರಬೇಕೆಂದು ಕೃಷ್ಣಬೈರೇಗೌಡರಿಗೆ ಸೂಚಿಸಲಾಗಿತ್ತು,ಅವರು ಈಗಾಗಲೇ ಅನೇಕ ಸುಧಾರಣೆಗಳನ್ನು ತಂದಿದ್ದಾರೆ. ಅವರಿಗೆ ಇನ್ನಷ್ಟ ಸುಧಾರಣೆಗಳನ್ನು ತರುವ ಶಕ್ತಿ ಇದೆ ಎಂದು ನಂಬಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಅಧಿಕಾರಿಗಳು ರೈತರಿಗೆ ಎಲ್ಲ ಸಮಯದಲ್ಲಿಯೂ ಲಭ್ಯವಿರಬೇಕು

ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವ್ಯಾಪ್ತಿಯ ಪಂಚಾಯಿತಿಯ ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿರುವುದರಿಂದ ರೈತರಿಗೆ ಎಲ್ಲ ಸಮಯದಲ್ಲಿಯೂ ಲಭ್ಯವಿರಲು ಸಾಧ್ಯವಾಗುತ್ತದೆ. ರೈತರ ಮನೆಮನೆಗೆ ಭೇಟಿ ನೀಡಿ ಅವರ ಕುಂದುಕೊರತೆಗಳನ್ನು ಆಲಿಸಬೇಕು. ಗ್ರಾಮ ಆಡಳಿತಾಧಿಕಾರಿಗಳ ಮಂಜೂ 9834 ಮಂಜೂರಾದ ಹುದ್ದೆಗಳಿಗೆ ಲ್ಯಾಪಟಾಪ್ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4000 ಲ್ಯಾಪ್ ಟಾಪ್ ಗಳನ್ನು ಇಂದು ನೀಡಲಾಗುತ್ತಿದೆ. ಯಾವುದೇ ಕಾರಣಕ್ಕೆ ರೈತರಿಗೆ ತೊಂದರೆ ಕೊಡುವುದಾಗಲಿ, ಭ್ರಷ್ಟಾಚಾರಕ್ಕಾಗಲಿ ಅವಕಾಶ ಕೊಡಬಾರದು. ಸಣ್ಣ ಹಿಡುವಳಿದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರಿಗೆ ಅನುಕೂಲ ಕಲ್ಪಿಸುವುದು ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದರು.

ಭೂಮಿ ಬೀಟ್ ಕಾರ್ಯಕ್ರಮ

ಕೃಷಿ, ಲಾಭದಾಯಕ ವೃತ್ತಿಯಾಗಿ ಉಳಿದುಕೊಂಡಿಲ್ಲ. ಅನ್ನದಾತರ ಹಾಗೂ ನಾಡಿನ ಒಳಿತಿಗೆ ಕೆಲಸ ಮಾಡುತ್ತಿರುವ ಅರಿವಿರಬೇಕು. ರೈತರಿಗೆ ಭೂಮಿ ಬೀಟ್ ಕಾರ್ಯಕ್ರಮ ಸರ್ಕಾರ ಜಾರಿಗೆ ತಂದಿದೆ. ವಿದ್ಯಾರ್ಥಿದೆಸೆಯಲ್ಲಿ ವ್ಯವಸಾಯ ಕೈಗೊಂಡ ಸಂದರ್ಭದಲ್ಲಿ ಪಕ್ಕದ ರೈತ ಜಮೀನನ್ನು ಅತಿಕ್ರಮಣ ಮಾಡಿದ್ದು, ಈ ಬಗ್ಗೆ ನಡೆದ ಪಂಚಾಯತಿಯ ಬಗ್ಗೆ ತಮ್ಮ ಅನುಭವ ಹಂಚಿಕೊಂಡ ಮುಖ್ಯಮಂತ್ರಿಗಳು, ಜಮೀನುಗಳನ್ನು ಅತಿಕ್ರಮಣದ ಇಂತಹ ಸಮಸ್ಯೆಗಳನ್ನು ನಿವಾರಿಸಲು ಭೂಮಿ ಬೀಟ್ ಕಾರ್ಯಕ್ರಮ ಅನುಕೂಲ ಕಲ್ಪಿಸಿದೆ ಎಂದರು.

ರೈತರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ

ಗ್ರಾಮ ಆಡಳಿತಾಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ, ರೈತರಿಗೆ ಅನ್ಯಾಯವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಜಮೀನಿನ ದಾಖಲಾತಿಗಳ ಹಾಗೂ ಸರ್ವೇಗಳು ಸಮರ್ಪಕವಾಗಿ ನಡೆದರೆ ಗ್ರಾಮಗಳಲ್ಲಿ ಭೂಮಿ ಕಲಹವಿಲ್ಲದೇ ಬಹುಮಟ್ಟಿಗೆ ನೆಮ್ಮದಿ ನೆಲಸಲು ಸಾಧ್ಯವಿದೆ. ಇಂದು ನೇಮಕಗೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು ಉದಾಸೀನತೆಯ ಭಾವನೆಯನ್ನು ತಳೆಯದೇ ಪ್ರಾಮಾಣಿಕವಾಗಿ ದುಡಿಯಬೇಕು ಎಂದು ತಿಳಿಸಿ ಶುಭಹಾರೈಸಿದರು.

9,834 ಗ್ರಾಮ ಆಡಳಿತಾಧಿಕಾರಿಗಳ ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್‌ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4 ಕ್ರೋಮ್‌ಬುಕ್‌ಗಳನ್ನು ಈಗ ನೀಡಲಾಗುತ್ತಿದೆ. ಹಂತಹಂತವಾಗಿ ಯಾವುದೇ ಗ್ರಾಮಾಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು… pic.twitter.com/0L0kjhdFKK

— DIPR Karnataka (@KarnatakaVarthe) April 30, 2025

BBMPಯ ನೂತನ ಮುಖ್ಯ ಆಯುಕ್ತರಾಗಿ ಮಹೇಶ್ವರ ರಾವ್, ಆಡಳಿತಗಾರಾಗಿ ತುಷಾರ್ ಗಿರಿನಾಥ್ ಅಧಿಕಾರ ಸ್ವೀಕಾರ

ಜನಗಣತಿಯೊಂದಿಗೆ ಜಾತಿ ಗಣತಿ: ಪ್ರಧಾನಿ ಮೋದಿ ನಿರ್ಧಾರ ಶ್ಲಾಘಿಸಿದ ಹೆಚ್.ಡಿ.ಕುಮಾರಸ್ವಾಮಿ

CM Siddaramaiah's good news for job seekers: 500 village administrator posts to be filled soon!
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

3 Mins Read

BIG NEWS : ಆರ್‌ಸಿಬಿ ವಿಜಯೋತ್ಸವ ವೇಳೆ ಹುಚ್ಚಾಟ : ಒಂದೇ ರಾತ್ರಿ 260 ಡ್ರಿಂಕ್ & ಡ್ರೈವ್‌ ಕೇಸ್ ದಾಖಲು!

2 Mins Read

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ತಲೆನೋವು ತಾಳಲಾರದೆ ಗನ್‌ನಿಂದ ಶೂಟ್ ಮಾಡಿಕೊಂಡು ವೃದ್ಧ ಆತ್ಮಹತ್ಯೆ!

2 Mins Read
Recent News

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

BIG NEWS : ಆರ್‌ಸಿಬಿ ವಿಜಯೋತ್ಸವ ವೇಳೆ ಹುಚ್ಚಾಟ : ಒಂದೇ ರಾತ್ರಿ 260 ಡ್ರಿಂಕ್ & ಡ್ರೈವ್‌ ಕೇಸ್ ದಾಖಲು!

BIG NEWS : ಅಪ್ರಾಪ್ತ ಮಕ್ಕಳನ್ನು `ಸೆಕ್ಸ್ ಟ್ರಾಫಿಕಿಂಗ್’ ದಂಧೆಗೆ ತಳ್ಳುವ ಆರೋಪಿಗಳ ವಿರುದ್ಧ `ಪೋಕ್ಸೋ ಕೇಸ್’ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

BREAKING : ಕಂಪ್ಯೂಟರ್ ಆಧಾರಿತ `NEET UG’ ಪರೀಕ್ಷೆಗೆ ಕೋರಿದ್ದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

State News
KARNATAKA

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

By kannadanewsnow57 KARNATAKA 3 Mins Read

ಬೆಂಗಳೂರು: ದೇಶದ ನಾಗರಿಕರಿಗೆ ಸರ್ಕಾರದ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ತಲುಪಿಸಲು ಮತ್ತು ಕಾಗದದ ಬಳಕೆಯನ್ನು ಕಡಿಮೆ ಮಾಡಲು ಭಾರತ ಸರ್ಕಾರವು…

BIG NEWS : ಆರ್‌ಸಿಬಿ ವಿಜಯೋತ್ಸವ ವೇಳೆ ಹುಚ್ಚಾಟ : ಒಂದೇ ರಾತ್ರಿ 260 ಡ್ರಿಂಕ್ & ಡ್ರೈವ್‌ ಕೇಸ್ ದಾಖಲು!

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ತಲೆನೋವು ತಾಳಲಾರದೆ ಗನ್‌ನಿಂದ ಶೂಟ್ ಮಾಡಿಕೊಂಡು ವೃದ್ಧ ಆತ್ಮಹತ್ಯೆ!

ಶಾಸಕ ಗೋಪಾಲಕೃಷ್ಣ ಬೇಳೂರು ಸಚಿವರಾಗಲಿ; ಸಾಗರದಲ್ಲಿ ನಾಗರಾಜ್ ಗುಡ್ಡೇಮನೆ ನೇತೃತ್ವದಲ್ಲಿ ವಿಶೇಷ ಪೂಜೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.