Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ‘ಅತಿಥಿ ಉಪನ್ಯಾಸಕ’ರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್: ಈ ಬೇಡಿಕೆ ಈಡೇರಿಕೆಗೆ ಸಮ್ಮತಿ
KARNATAKA

BIG NEWS: ರಾಜ್ಯ ‘ಅತಿಥಿ ಉಪನ್ಯಾಸಕ’ರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್: ಈ ಬೇಡಿಕೆ ಈಡೇರಿಕೆಗೆ ಸಮ್ಮತಿ

By kannadanewsnow0906/01/2024 5:03 PM

ಬೆಂಗಳೂರು:  ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉನ್ನತ ಶಿಕ್ಷಣ ಸಚಿವರಾದ ಡಾ||ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣನವರ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚಿಸಿ, ಅತಿಥಿ ಉಪನ್ಯಾಸಕರ ನೆರವಿಗೆ ನಿಲ್ಲುವ ಉದ್ದೇಶದಿಂದ ಹಲವು ಮಹತ್ವದ ನಿರ್ಣಯಗಳನ್ನು ಘೋಷಿಸಿದ್ದಾರೆ. ಅದರಲ್ಲಿ ಗೌರವಧನವನ್ನು 5,000ದಿಂದ 8,000ಕ್ಕೆ ಹೆಚ್ಚಳ ಮಾಡುವುದು ಒಂದಾಗಿದೆ.

ಈ ಕುರಿತಂತೆ ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಸಿಎಂ ಸಿದ್ಧರಾಮಯ್ಯ, ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ. ಅವರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡುವ ಜೊತೆಗೆ ಕೆಲವು ಹೊಸ ಸೌಲಭ್ಯಗಳನ್ನು ನೀಡಲಾಗುವುದು ಎಂದಿದ್ದಾರೆ.

ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ನಾನು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದೆ. ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ಗೌರವಧನ ಹೆಚ್ಚಳಕ್ಕೆ ಮುಂದಾಗಿದೆ ಎಂದು ತಿಳಿಸಿದ್ದಾರೆ.

ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದಿದ್ದಾರೆ.

ಇದರ ಜೊತೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಟು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲಾಗುವುದು ಅಂತ ತಿಳಿಸಿದ್ದಾರೆ.

ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರ ಸೇವಾನುಭವ ಆಧರಿಸಿ, ವೆಯ್ಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಜೊತೆ ಇದೆ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಲ್ಲಿ ಮನವಿ ಮಾಡುತ್ತೇನೆ.

ಮುಖ್ಯಮಂತ್ರಿ @siddaramaiah ಅವರು ಉನ್ನತ ಶಿಕ್ಷಣ ಸಚಿವರಾದ ಡಾ||ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣನವರ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚಿಸಿ, ಅತಿಥಿ ಉಪನ್ಯಾಸಕರ ನೆರವಿಗೆ ನಿಲ್ಲುವ ಉದ್ದೇಶದಿಂದ ಹಲವು ಮಹತ್ವದ ನಿರ್ಣಯಗಳನ್ನು ಘೋಷಿಸಿದರು.

ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ… pic.twitter.com/cWQD2TQjfP

— CM of Karnataka (@CMofKarnataka) January 6, 2024

ರಾಜ್ಯದಲ್ಲಿ ಮತ್ತೊಂದು ‘ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಜ್ಜು

BREAKING: ಇಸ್ರೋದ ಮೊದಲ ಸೂರ್ಯ ಮಿಷನ್ ಯಶಸ್ವಿ: ಅಂತಿಮ ಕಕ್ಷೆಗೆ ಆದಿತ್ಯ ಎಲ್1 ಸೇರ್ಪಡೆ | Aditya L-1

Share. Facebook Twitter LinkedIn WhatsApp Email

Related Posts

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM1 Min Read

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM1 Min Read
Recent News

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM
State News
KARNATAKA

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

By kannadanewsnow0907/06/2025 9:21 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು…

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.