ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮುಖವಾಡ ಕಳಚಿದೆ, ರಾಜೀನಾಮೆ ಕೊಡೋದು ಗ್ಯಾರಂಟಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತಿಳಿಸಿದ್ದಾರೆ.
ಅವರು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಸಿದ್ದರಾಮಯ್ಯ ಶಾಸಕರ ಸಭೆ ಮಾಡಿ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಆದರೆ ಪಕ್ಷದ ಹೈಕಮಾಂಡ ಅವರ ಬದಲಾವಣೆ ಮಾಡುವುದು ಬಗ್ಗೆ ಆಲೋಚಿಸುತ್ತಿದ್ದಾರೆ. ಆದ್ದರಿಂದ ಅವರು ದೆಹಲಿ ನಾಯಕ ಭೇಟಿಗೆ ಹೋಗಿದ್ದಾರೆ ಅಂತ ಅವರು ವ್ಯಂಗ್ಯವಾಡಿದರು.ಇದಲ್ಲದೇ ಸಿಎಂ ತಮ್ಮ ಮೇಲಿನ ಮುಡಾ ಹಗರಣದಿಂದ ನುಣುಚಿಕೊಳ್ಳಲು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲಿನ 15ಕ್ಕೂ ಹೆಚ್ಚು ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಅಂಥ ತಿಳಿಸದಿರು.