ಬೆಂಗಳೂರು: ಒಂದೆಡೆ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡಿದೆ. ಮತ್ತೊಂದೆಡೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಸಭೆಯನ್ನು ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಇಂದಿನ ಸಿಎಂ ಸಿದ್ಧರಾಮಯ್ಯ ಅವರ ತುಮಕೂರು ಪ್ರವಾಸ ರದ್ದುಗೊಂಡಿರುವುದಾಗಿ ಸಿಎಂ ಕಚೇರಿಯಿಂದ ತಿಳಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 07-11-2025ರಂದು ಶುಕ್ರವಾರ ಕೈಗೊಳ್ಳಲು ಉದ್ದೇಶಿಸಲಾಗಿದ್ದಂತ ತುಮಕೂರು ಜಿಲ್ಲಾ ಪ್ರವಾಸವನ್ನು ಅನಿವಾರ್ಯ ಕಾರಣಗಳಿಂದ ರದ್ದುಪಡಿಸಲಾಗಿದೆ ಎಂಬುದಾಗಿ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ಮಾಹಿತಿ ನೀಡಿದ್ದಾರೆ.
BREAKING: ಬೆಳಗಾವಿಯಲ್ಲಿ ಭುಗಿಲೆದ್ದ ರೈತರ ಕಿಚ್ಚು: ಪೊಲೀಸರು, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ
BIG NEWS: ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆ ಅಸಾಧ್ಯ: ಸಿಎಂ ಮುಂದೆ ಸಕ್ಕರೆ ಕಾರ್ಖಾನೆ ಮಾಲೀಕರು ಪಟ್ಟು








