ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ವಿರುದ್ಧದ ಮುಡಾ ಹಗರಣದ ಬಗ್ಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಆರಂಭಗೊಂಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠದಲ್ಲಿ ಇಂದು 2.30ಕ್ಕೆ ಅರ್ಜಿಯ ವಿಚಾರಣೆ ಆರಂಭಗೊಂಡಿದೆ. ಸಿಎಂ ಸಿದ್ಧರಾಮ್ಯ ಪರವಾಗಿ ಹೈಕೋರ್ಟ್ ನಲ್ಲಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ವಿವಿಧ ಸುಪ್ರೀಂ ಕೋರ್ಟ್ ವಕೀಲರು ವಾದವನ್ನು ಮಂಡಿಸುತ್ತಿದ್ದಾರೆ.
ಈಗಾಗಲೇ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ವಿಚಾರವನ್ನು ಸಂಪೂರ್ಣವಾಗಿ ವಕೀಲರರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚರ್ಚಿಸಿದ್ದಾರೆ. ತುರ್ತು ಅರ್ಜಿಯ ವಿಚಾರಣೆಯನ್ನು ಕೋರಿದ್ದರಿಂದ ಇಂದೇ ಹೈಕೋರ್ಟ್ ಗೆ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಲಾಗುತ್ತಿದೆ.
ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಿಟ್ ಅರ್ಜಿಯ ವಿಚಾರಣೆ ನಂತ್ರ ಯಾವ ತೀರ್ಪು ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
BIG NEWS: ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದರೆ ರಾಜ್ಯಪಾಲರೇ ಹೊಣೆ: ಸಚಿವ ಜಮೀರ್ ಅಹ್ಮದ್ ಎಚ್ಚರಿಕೆ
BREAKING : ಪ್ರತಿಭಟನೆ ವೇಳೆ ಸಿದ್ದರಾಮಯ್ಯ ಅಭಿಮಾನಿಗೆ ತಗುಲಿದ ಬೆಂಕಿ : ಆಸ್ಪತ್ರೆಗೆ ದಾಖಲು