ಬೆಂಗಳೂರು: ಚೀನಾದ ಪ್ರಸ್ತುತ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗುವ ಕೋವಿಡ್ ತಳಿಯಾದ ಒಮಿಕ್ರಾನ್ ಉಪ-ರೂಪಾಂತರ ಬಿಎಫ್7 ಪತ್ತೆಯಾಗಿದೆ.
ಇದರಿಂದ ಕರ್ನಾಟಕದಲ್ಲಿ ಆತಂಕ ಶುರುವಾಗಿದೆ. ಕೊರೊನಾ ಮಾರಿಯಿಂದ ಕರಾಳ ದಿನವನ್ನು ನೆನಪಿಗೆ ತರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ವಿಧಾನಸಭೆ ಕಲಾಪ ಮುಗಿಯುತ್ತಿದ್ದಂತೆ ಸಿಎಂ ಸಭೆ ನಡೆಸಲಿದ್ದಾರೆ. ಕೋವಿಡ್ ಸಂಬಂಧ ತಜ್ಞರ ಜೊತೆ ಸಭೆ ನಡೆಸಲಿದ್ದಾರೆ.
ಸಭೆ ನಂತರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಸರ್ಕಾರದ ಸೂಚನೆಯಂತೆ ಬಿಬಿಎಂಪಿ ಕ್ರಮ ಕೈಗೊಳ್ಳಲಿದೆ. ಎಲ್ಲರೂ ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.