ಬೆಂಗಳೂರು: ರಾಜ್ಯದಲ್ಲಿ ಸಿಎಎ ಜಾರಿ ವಿಚಾರವಾಗಿ ಇನ್ನೂ ಚರ್ಚೆ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಸಿಎಎ ಜಾರಿ ಮಾಡಬೇಕೇ ಅಥವಾ ತಿರಸ್ಕರಿಸಬೇಕೆ ಎಂಬುದು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
‘IT’ ಇಲಾಖೆ ನೋಟಿಸ್ ಗೆ ತಡೆ ನೀಡುವಂತೆ ಕೋರಿದ ‘ಕಾಂಗ್ರೆಸ್’ ಅರ್ಜಿ ತಿರಸ್ಕರಿಸಿದ ದಿಲ್ಲಿ ‘ಹೈಕೋರ್ಟ್’
ಕಾಂಗ್ರೆಸ್ ಆಡಳಿತ ಇರುವ ಕರ್ನಾಟಕದಲ್ಲಿಯೂ ಸಿಎಎ ಜಾರಿಯಾಗಲಿದೆಯೇ ಎಂಬ ಚರ್ಚೆ ಶುರುವಾಗಿದೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಿಎಎ ಜಾರಿ ವಿಚಾರವಾಗಿ ಇನ್ನೂ ಏನೂ ಚರ್ಚೆ ಮಾಡಿಲ್ಲ ಎಂದು ಹೇಳಿದರು.
ಆಹಾರ ಸುರಕ್ಷತೆ ಹೆಚ್ಚಿಸಲು ‘ಭಾರತ-ಭೂತಾನ್ ಒಪ್ಪಂದ’ಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಕಾಪಾಡಿಕೊಳ್ಳಬೇಕು. ಆದರೆ ಬಿಜೆಪಿಯವರು ಅದನ್ನು ಬೇರೆ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಇಷ್ಟು ದಿನ ಸುಮ್ಮನಿದ್ದು ಈಗ ಯಾಕೆ ಜಾರಿಗೆ ತಂದಿದ್ದಾರೆ? ರಾಜಕೀಯ ಲಾಭಕ್ಕಾಗಿ ಬಿಜೆಪಿ ಸಿಎಎ ಜಾರಿಗೊಳಿಸಿದೆ. ಮತ ಧ್ರುವೀಕರಣದ ಉದ್ದೇಶ ಇದರ ಹಿಂದಿದೆ ಎಂದು ಆರೋಪಿಸಿದರು.
ನಮ್ಮ ಬಳಿ ಲೋಕಸಭಾ ಚುನಾವಣೆಗೆ ಖರ್ಚು ಮಾಡಲು ‘ಹಣವಿಲ್ಲ’-ಹೊಸ ಬಾಂಬ್ ಸಿಡಿಸಿದ ಮಲ್ಲಿಕಾರ್ಜುನ ಖರ್ಗೆ
ಕೇಂದ್ರ ಸರ್ಕಾರ ಹೊರಡಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆಯನ್ನು ಪ್ರತಿಪಕ್ಷಗಳು ಅಧಿಕಾರದಲ್ಲಿರುವ ಬಹುತೇಕ ರಾಜ್ಯಗಳು ವಿರೋಧಿಸಿವೆ. ಕರ್ನಾಟಕದಲ್ಲಿಯೂ ಈ ಕಾಯ್ದೆ ಜಾರಿ ಬಗ್ಗೆ ಜನರಲ್ಲಿ ಕುತೂಹಲವಿದೆ.