ಮೈಸೂರು: ಇಂದು ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು ಮೈಸೂರು ದಸರಾ ಜಂಬೂ ಸವಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿದ್ದಾರೆ. ಈ ವೇಳೆ ಚಾಮುಂಡಿಬೆಟ್ಟದಲ್ಲಿ ದೇವಿಯ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ಕೊಟ್ಟಿದ್ದಾರೆ. ನಂತರ ಮೈಸೂರಿನಲ್ಲಿರುವ ಸುತ್ತೂರು ಮಠಕ್ಕೆ ಕೂಡ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ.
ಸುತ್ತೂರು ಶ್ರೀಗಳ ಆಶೀರ್ವಾದವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಪಡೆದುಕೊಂಡಿದ್ದಾರೆ. ನಂತರ ಸುತ್ತೂರು ಶಾಖ ಮಠದಲ್ಲೇ ತಿಂಡಿ ಸೇವಿಸಿದ್ದಾರೆ.
ಇನ್ನು ಮೈಸೂರು ವಿಶ್ವವಿಖ್ಯಾತ ದಸರಾ ನೋಡಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಮಧ್ಯಾಹ್ನ ಎರಡು ಗಂಟೆಯ ನಂತರ ಜಂಬೂಸವಾರಿಗೆ ಚಾಲನ ನೀಡಲಾಗಿದೆ. ಹೀಗಾಗಿ ಅರಮನೆಯ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.