ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣಗೆ ಈಗಾಗಲೇ ಬಂಧನ ವಾರೆಂಜ್ ಜಾರಿ ಮಾಡಲಾಗಿದೆ. ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಕೋರಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪಾಸ್ ಪೋರ್ಟ್ ರದ್ದು ಮಾಡಿದ್ರೆ ಪ್ರಜ್ವಲ್ ರೇವಣ್ಣ ಬರಬೇಕಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು ವಿದೇಶದಲ್ಲಿ ಅಜ್ಞಾತವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಕೋರಿ ವಿದೇಶಾಂಗ ಇಲಾಖೆಗೆ ಎಸ್ ಐಟಿ ಪತ್ರ ಬರೆದಿದೆ. ಲೈಂಗಿಕ ಹಗರಣ ಬೆಳಿಕಗೆ ಬಂದ ನಂತರ ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿಕೊಂಡು ಏಪ್ರಿಲ್ 26 ರಂದು ಜಮರ್ನಿಯ ಮ್ಯೂನಿಕ್ ನಗರಕ್ಕೆ ತೆರಳಿರುವ ಪ್ರಜ್ವಲ್ ರೇವಣ್ಣ ಅಂದಿನಿಂದ ಬಹಿರಂತವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಪ್ರಸ್ತುತ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಪಾಸ್ ಪೋರ್ಟ್ ರದ್ದತಿಗೆ ಎಸ್ ಐಟಿ ಮುಂದಾಗಿದ್ದು, ಈ ಸಂಬಂಧ ವಿದೇಶಾಂಗ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದೆ.