ಸುಭಾಷಿತ :

Tuesday, April 7 , 2020 6:26 PM

ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ ಸಿಎಂ ಬಿಎಸ್ ವೈ!


Monday, February 24th, 2020 6:52 am

ಶಿವಮೊಗ್ಗ : ಸಿಎಂ ಬಿ.ಎಸ್. ಯಡಿಯೂರಪ್ಪ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು,  ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಕೃಷಿ, ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 5ರಂದು ಬಜೆಟ್‌ ಮಂಡನೆ ಮಾಡಲಿದ್ದು, ಅದಕ್ಕೆ ಪೂರ್ವಭಾವಿ ಸಿದ್ಧತೆ ಆಗಿದೆ. ಹಣಕಾಸಿನ ಸ್ಥಿತಿ ನೋಡಿಕೊಂಡು, ಇತಿಮಿತಿಯೊಳಗೆ ಕೃಷಿ ಮತ್ತು ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಇನ್ನು ಸೋಮವಾರ ಶಿವಮೊಗ್ಗದಲ್ಲಿ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದೇನೆ. ಸೊರಬ ಹಾಗೂ ಶಿಕಾರಿಪುರದಲ್ಲಿ ನೀರಾವರಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದೇನೆ. ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಅಭಿವೃದ್ಧಿ ಕೈಗೊಳ್ಳಲಾಗಿದ್ದು, ಮುಂದಿನ ಮೂರುವರೆ ವರ್ಷದಲ್ಲಿ ಇನ್ನು ಅಭಿವೃದ್ಧಿ ಮಾಡುವುದಾಗಿ ತಿಳಿಸಿದರು. 15 ನೇ ಹಣಕಾಸು ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಕಡಿಮೆ ಅನುದಾನದ  ಬಗ್ಗೆ ಗಮನಹರಿಸಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions