ಸುಭಾಷಿತ :

Monday, March 30 , 2020 11:57 PM

ಬಜೆಟ್‍ನಲ್ಲಿ ಕೃಷಿ ಮತ್ತು ನೀರಾವರಿಗೆ ಒತ್ತು – ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ


Friday, February 21st, 2020 5:44 pm


ಮೈಸೂರು : ಮುಂಬರುವ ರಾಜ್ಯ ಬಜೆಟ್‍ನಲ್ಲಿ ಕೃಷಿ ಮತ್ತು ನೀರಾವರಿ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮಾರ್ಚ್ 5ಕ್ಕೆ ಆಯವ್ಯಯ ಮಂಡಿಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ರೈತಪರವಾದ ಬಜೆಟ್ ಮಂಡಿಸಲಾಗುವುದು. ಅನೇಕ ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಕಳಸಾ-ಬಂಡೂರಿ ನಾಲಾ ಯೋಜನೆಗಳಿಗೆ ಇದ್ದ ಅಡೆತಡೆ ನಿವಾರಣೆ ಆಗಿರುವುದು ಸಂತೋಷದ ಸಂಗತಿ. ಆದ್ದರಿಂದ ಈ ಯೋಜನೆಗಳಿಗೆ ಕೂಡಲೇ ಚಾಲನೆ ನೀಡಲಾಗುವುದು. ನೆರೆ ಹಾಗೂ ಭರ ಸಂತ್ರಸ್ತರಿಗೆ ಈಗಾಗಲೇ ಶಕ್ತಿ ಮೀರಿ ಪರಿಹಾರ ಕ್ರಮ ಕೈಗೊಂಡಿದ್ದೇವೆ. ಎಲ್ಲಾದರೂ ಲೋಪ ಕಂಡು ಬಂದಲ್ಲಿ ಸರಿಪಡಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions