ಬೆಂಗಳೂರು: ಸಿಎಂ ಕಚೇರಿಯಿಂದ ( CM Office ) ಪತ್ರಕರ್ತರಿಗೆ ( Journalist ) ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು? ಸರ್ಕಾರದ್ದೇ? ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ? 40% ಕಮಿಷನ್ ಆ ಹಣದ ಮೂಲವೇ? ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ? ಸಿಎಂ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ? ಎಂದು ಕರ್ನಾಟಕ ಕಾಂಗ್ರೆಸ್ ( Karnataka Congress ) ಆಗ್ರಹಿಸಿದೆ.
ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು.
ಆ ಹಣ ಯಾರದ್ದು? ಸರ್ಕಾರದ್ದೇ? ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ?
40% ಕಮಿಷನ್ ಆ ಹಣದ ಮೂಲವೇ?
ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ?@BSBommai ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ?#SayCM— Karnataka Congress (@INCKarnataka) October 28, 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರ ಕಚೇರಿಯಿಂದ ದೀಪಾವಳಿ ಉಡುಗೋರೆಯಾಗಿ ಪತ್ರಕರ್ತರಿಗೆ ಸಿಹಿ ತಿಂಡಿ ಜೊತೆಗೆ ಹಣವನ್ನು ಇಟ್ಟು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಟ್ವಿಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ಸಿಎಂ ಕಚೇರಿ ನೀಡಿದ ₹2.5 ಲಕ್ಷ ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು ಎಂದು ಒತ್ತಾಯಿಸಿದೆ.
ಸಿಎಂ ಕಚೇರಿ ನೀಡಿದ ₹2.5 ಲಕ್ಷ ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ.
ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ.
ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು.#SayCM
— Karnataka Congress (@INCKarnataka) October 28, 2022
ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 40% ಕಮಿಷನ್ನಲ್ಲಿ ನೀಡಿದ ಹಣವೇ? 40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ? ಬಸವರಾಜ ಬೊಮ್ಮಾಯಿ ಅವರೇ, ಆ ‘ಲಂಚ’ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಒತ್ತಾಯಿಸಿದೆ.
ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.
40% ಕಮಿಷನ್ನಲ್ಲಿ ನೀಡಿದ ಹಣವೇ?
40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ?
ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ?@BSBommai ಅವರೇ, ಆ 'ಲಂಚ'ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು.#SayCM— Karnataka Congress (@INCKarnataka) October 28, 2022