ಬೆಂಗಳೂರು: ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ಬಂಧನವನ್ನು ಖಂಡಿಸಿ ಇಂದು ಇಲ್ಲಿನ “ಫ್ರೀಡಂ ಪಾರ್ಕ್”ನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆ ತಾರಕ್ಕೇರಿದಂತ ಸಂದರ್ಭದಲ್ಲಿ ಪೊಲೀಸರು ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರು ಮಾತನಾಡಿ ಬಂಧನ ಕ್ರಮವನ್ನು ಆಕ್ಷೇಪಿಸಿದರು.
ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಸಚಿವ ಭೈರತಿ ಬಸವರಾಜ್, ಶಾಸಕ ರವಿಸುಬ್ರಹ್ಮಣ್ಯ, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಹರೀಶ್ ಪೂಂಜಾ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬಿಬಿಎಂಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಮಲೆನಾಡಲ್ಲಿ ‘ಹೊಸ ವರ್ಷ ಆಚರಣೆ’ ಆಸೆ ಇದೆಯೇ? ಇಲ್ಲಿದೆ ಸುವರ್ಣಾವಕಾಶ | Malnad Karnival New Year Celebration
ಓದಿ ಉತ್ತಮ ಸಾಧನೆ ಮಾಡಬೇಕಿದ್ದ ಬಾಲಕಿಗೆ ಅನಾರೋಗ್ಯ: ನಿಮ್ಮ ನೆರವು, ಸಹಕಾರಕ್ಕೆ ಮನವಿ