ಮಹಾರಾಷ್ಟ್ರ : ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಶುಕ್ರವಾರ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ದಕ್ಷಿಣದಲ್ಲಿರುವ ಅರೇಬಿಯನ್ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಿಂದ 18 ಜನರನ್ನು ರಕ್ಷಿಸಿದೆ. ಹಡಗಿನಲ್ಲಿ 17 ಭಾರತೀಯರು ಮತ್ತು ಒಬ್ಬ ಇಥಿಯೋಪಿಯನ್ ಪ್ರಜೆ ಇದ್ದರು.
ದೋಣಿ ಮುಳುಗುತ್ತಿರುವುದನ್ನು ಗಮನಿಸಿದ ತಕ್ಷಣ, ಭಾರತೀಯ ಕೋಸ್ಟ್ ಗಾರ್ಡ್ ಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಬಳಿಕಭಾರತೀಯ ಕೋಸ್ಟ್ ಗಾರ್ಡ್ ನ ಎರಡು ಹಡಗುಗಳು ಮತ್ತು ಒಂದು ಹೆಲಿಕಾಪ್ಟರ್ ಅನ್ನು ಸಂಘಟಿತ ರಕ್ಷಣಾ ಕಾರ್ಯಾಚರಣೆಗಾಗಿ ಸೇವೆಗೆ ನಿಯೋಜಿಸಲಾಯಿತು. ಪ್ರಯಾಣಿಕರನ್ನು ಸುರಕ್ಷಿತವಾಗಿ ದಡಕ್ಕೆ ಕರೆತರಲಾಯಿತು.