ಹಾಸನ: ಎರಡು ದಿನಗಳ ಹಿಂದಷ್ಟೇ ವ್ಯಕ್ತಿಯ ಮೇಲೆ ಹಾಸನದಲ್ಲಿ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿತ್ತು. ಈ ಬೆನ್ನಲ್ಲೇ ಹಾಸನದಲ್ಲಿ ಕಾಡಾನೆ ದಾಳಿಗೆ ಇಂದು ಕಾಫಿ ಬೆಳೆಗಾರ ಬಲಿಯಾಗಿದ್ದಾನೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬೈಕೆರೆ ಗ್ರಾಮದಲ್ಲಿ ಕಾಫಿ ತೋಟದಲ್ಲಿದ್ದಂತ ಷಣ್ಮುಖ(36) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಷಣ್ಮುಖ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಎರಡು ದಿನಗಳ ಹಿಂದಷ್ಟೇ ವ್ಯಕ್ತಿಯ ಮೇಲೆ ಹಾಸನದಲ್ಲಿ ಕಾಡಾನೆ ದಾಳಿ ಮಾಡಿತ್ತು. ಇಂದು ಬೆಳಗ್ಗೆ ಕಾಫಿ ಬೆಳೆಗಾರ ಷಣ್ಮುಖನ ಮೇಲೆ ಒಂಟಿ ಸಲಗ ದಾಳಿ ಮಾಡಿ ಕೊಂದಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆಯ ಆಡಳಿತಾತ್ಮಕ ಹುದ್ದೆಗಳ ಭರ್ತಿಗೆ ಕ್ರೂಢೀಕೃತ, ಪರಿಷ್ಕೃತ ಮಾನದಂಡ ಜಾರಿ