ಬೆಂಗಳೂರು: ಸಿದ್ದರಾಮಯ್ಯ ( Siddaramaiah ) ಅವರು ಹೋದಲ್ಲೆಲ್ಲಾ ಕಾಂಗ್ರೆಸ್ ಅಭ್ಯರ್ಥಿ ( Congress Candidate ) ಘೋಷಣೆ ಮಾಡುತ್ತಿದ್ದರು. ಇದನ್ನು ನಿಯಂತ್ರಿಸಲು “ಟಿಕೆಟ್ ಘೋಷಿಸುವ ಅಧಿಕಾರ ಸಿದ್ದರಾಮಯ್ಯ ಅವರಿಗಿಲ್ಲ” ಎನ್ನುವ ಹೇಳಿಕೆಯನ್ನು ಡಿಕೆಶಿ ಘಂಟಾಘೋಷವಾಗಿ ನೀಡಿದರು. ಸಿಎಂ ಕುರ್ಚಿಗಾಗಿ ಶೀತಲ ಸಮರವೇ? ಎಂದು ಕಾಂಗ್ರೆಸ್ ನಾಯಕರನ್ನು ಬಿಜೆಪಿ ಟ್ವಿಟ್ಟರ್ ನಲ್ಲಿ ಪ್ರಶ್ನಿಸಿದೆ.
ಸಿದ್ದರಾಮಯ್ಯ ಅವರು ಹೋದಲ್ಲೆಲ್ಲಾ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡುತ್ತಿದ್ದರು.
ಇದನ್ನು ನಿಯಂತ್ರಿಸಲು "ಟಿಕೆಟ್ ಘೋಷಿಸುವ ಅಧಿಕಾರ ಸಿದ್ದರಾಮಯ್ಯ ಅವರಿಗಿಲ್ಲ" ಎನ್ನುವ ಹೇಳಿಕೆಯನ್ನು ಡಿಕೆಶಿ ಘಂಟಾಘೋಷವಾಗಿ ನೀಡಿದರು.
ಸಿಎಂ ಕುರ್ಚಿಗಾಗಿ ಶೀತಲ ಸಮರವೇ?#SidduVsDKS pic.twitter.com/SVIDXXhizW
— BJP Karnataka (@BJP4Karnataka) November 29, 2022
ಈ ಕುರಿತಂತೆ ಸಿದ್ದು ವರ್ಸಸ್ ಡಿಕೆಶಿ ಎಂಬುದಾಗಿ ಸರಣಿ ಟ್ವಿಟ್ ಮಾಡಿರುವಂತ ಬಿಜೆಪಿ ಕರ್ನಾಟಕವು(BJP Karnataka), ಹೈಕಮಾಂಡ್ ಒತ್ತಡದಿಂದ ಸಿದ್ಧರಾಮಯ್ಯ ಟಿಕೆಟ್ಗಾಗಿ ಅರ್ಜಿ ಸಲ್ಲಿಸುತ್ತಿದ್ದಂತೆ “ಒಬ್ಬರಿಗೆ ಒಂದೇ ಕ್ಷೇತ್ರ” ಎಂಬ ಹೊಸ ನಿಯಮವನ್ನು ಡಿ.ಕೆ ಶಿವಕುಮಾರ್ ಘೋಷಿಸಿದರು. ಸಿದ್ದರಾಮಯ್ಯ ಅವರನ್ನೇ ಗುರಿಯಾಗಿಸಿ ಟಿಕೆಟ್ ಅರ್ಜಿ, ಒಂದೇ ಕ್ಷೇತ್ರದ ಷರತ್ತು ವಿಧಿಸಲಾಗುತ್ತಿದೆ. ಸಿದ್ದರಾಮಯ್ಯ ಅವರೇ, ನಿಮಗೆ ಖೆಡ್ಡಾ ತೋಡುತ್ತಿದ್ದಾರೆ ಎಂದಿದೆ.
ಹೈಕಮಾಂಡ್ ಒತ್ತಡದಿಂದ @siddaramaiah ಟಿಕೆಟ್ಗಾಗಿ ಅರ್ಜಿ ಸಲ್ಲಿಸುತ್ತಿದ್ದಂತೆ "ಒಬ್ಬರಿಗೆ ಒಂದೇ ಕ್ಷೇತ್ರ" ಎಂಬ ಹೊಸ ನಿಯಮವನ್ನು @dkshivakumar ಘೋಷಿಸಿದರು.
ಸಿದ್ದರಾಮಯ್ಯ ಅವರನ್ನೇ ಗುರಿಯಾಗಿಸಿ ಟಿಕೆಟ್ ಅರ್ಜಿ, ಒಂದೇ ಕ್ಷೇತ್ರದ ಷರತ್ತು ವಿಧಿಸಲಾಗುತ್ತಿದೆ.
ಸಿದ್ದರಾಮಯ್ಯ ಅವರೇ, ನಿಮಗೆ ಖೆಡ್ಡಾ ತೋಡುತ್ತಿದ್ದಾರೆ!#SidduVsDKS
— BJP Karnataka (@BJP4Karnataka) November 29, 2022
ಚುನಾವಣಾ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರೊಳಗಿನ ಕಾದಾಟ ಮತ್ತೆ ತಾರಕಕ್ಕೇರಿದೆ. ಸಿಎಂ ಕುರ್ಚಿಗಾಗಿ ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್ ದಿನನಿತ್ಯ ಬೀದಿಕಾಳಗ ಮಾಡುತ್ತಿದ್ದಾರೆ. ಸಿದ್ದರಾಮಯ್ಯರನ್ನು ಹಣಿಯಲೆಂದೇ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿ ಎಂಬ ಹೊಸ ನಿಯಮವನ್ನು ಡಿಕೆಶಿ ಜಾರಿಗೆ ತಂದರು ಎಂದು ವ್ಯಂಗ್ಯವಾಡಿದೆ.
ಚುನಾವಣಾ ಕಾಲದಲ್ಲಿ @inckarnataka ಪಕ್ಷದ ನಾಯಕರೊಳಗಿನ ಕಾದಾಟ ಮತ್ತೆ ತಾರಕಕ್ಕೇರಿದೆ.
ಸಿಎಂ ಕುರ್ಚಿಗಾಗಿ @siddaramaiah ಮತ್ತು @dkshivakumar ದಿನನಿತ್ಯ ಬೀದಿಕಾಳಗ ಮಾಡುತ್ತಿದ್ದಾರೆ.
ಸಿದ್ದರಾಮಯ್ಯರನ್ನು ಹಣಿಯಲೆಂದೇ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿ ಎಂಬ ಹೊಸ ನಿಯಮವನ್ನು ಡಿಕೆಶಿ ಜಾರಿಗೆ ತಂದರು.#SidduVsDKS pic.twitter.com/I2swHgZ3Wl
— BJP Karnataka (@BJP4Karnataka) November 29, 2022