ಬೆಂಗಳೂರು: ಬಿಬಿಎಂಪಿಯಿಂದ ನಗರದ ಮತದಾರರ ಪಟ್ಟಿಯನ್ನು ( Voter List ) ಪರಿಷ್ಕರಣೆಗೆ ಖಾಸಗಿ ಸಂಸ್ಥೆಯಾದಂತ ಚಿಲುಮೆಗೆ ವಹಿಸಲಾಗಿತ್ತು. ಆದ್ರೇ ಚಿಲುಮೆ ಸಂಸ್ಥೆಯು ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿಯೇ ಚಿಲುಮೆ ಸಂಸ್ಥೆಗೆ ನೀಡಿದ್ದಂತ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ರದ್ದುಗೊಳಿಸಲಾಗಿತ್ತು. ಇದೀಗ ಬಿಬಿಎಂಪಿಯಿಂದ ಚಿಲುಮೆ ಸಂಸ್ಥೆಯ ( Chilume Company ) ವಿರುದ್ಧ ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹ ಸಂಬಂಧ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕೋರ್ಟ್ ಕಟ್ಟಡವನ್ನೇ ಗೋಡೌನ್ ಮಾಡಿಕೊಂಡಿದ್ದ ಆರೋಪಿಗೆ ನ್ಯಾಯಂಗ ಬಂಧನ
ಈ ಕುರಿತು ಬಿಬಿಎಂಪಿ ( BBMP ) ಮಾಹಿತಿ ನೀಡಲಾಗಿದ್ದು, ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ದಿ ಸಂಸ್ಥೆ ವಿರುದ್ದ ಹಲಸೂರು ಗೇಟ್ ಪೋಲೀಸ್ ಠಾಣೆ ಮತ್ತು ಕಾಡುಗೋಡಿ ಪೋಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲಾಗಿದೆ. ಅಲ್ಲದೇ ಮತದಾರರ ವೈಯಕ್ತಿ ಮಾಹಿತಿಯನ್ನು ಸಂಗ್ರಹಿಸುತ್ತಿರುವ ದೂರಿನ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ವಿಚಾರಣೆ ನಡೆಸಿ ವರದಿ ನೀಡಲು ಅಪರ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚನೆಯನ್ನು ಜಿಲ್ಲಾ ಚುನಾವಾಣಿಧಿಕಾರಿಗಳು ಹಾಗೂ ಮುಖ್ಯ ಆಯುಕ್ತರು, ಬಿಬಿಎಂಪಿ ತಿಳಿಸಿದ್ದಾರೆ ಎಂದಿದೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 20230 ಕಾರ್ಯಚಟುವಟಿಕೆಗಳ ಕುರಿತು ಜಿಲ್ಲಾ ಚುನಾವಣಾಧಿಕಾರಿ ಬೆಂಗಳೂರು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಶೈಕ್ಷಣಿಕ ಸಾಂಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿತ್ತು ಎಂದು ಹೇಳಿದೆ.
ಬೆಂಗಳೂರಿಗರೇ ಗಮನಿಸಿ : ನ.21 ರಂದು ಈ ಪ್ರದೇಶಗಳಲ್ಲಿ ‘ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ |Water Supply
ಸದರಿ ಸಂಸ್ಥೆಯ ವಿರುದ್ಧ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದಿದ್ದರ ಹಿನ್ನಲೆಯಲ್ಲಿ ಷರತ್ತು ಉಲ್ಲಂಘಿಸಿರುವುದನ್ನು ಪರಿಗಣಿಸಿ ಅನುಮತಿ ಪತ್ರವನ್ನು ರದ್ದುಪಡಿಸಲಾಗಿರುತ್ತದೆ. ಮಾಹಿತಿ ಸಂಗ್ರಹಣೆ ಕುರಿತು ಅನುಮಾನ ಬಂದಿದ್ದರ ಹಿನ್ನಲೆಯಲ್ಲಿ ಸದರಿ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಕಾಡುಗೋಡಿ ಪೋಲೀಸ್ ಠಾಣೆ ಮತ್ತು ಹಲಸೂರುಗೇಟ್ ಪೋಲೀಸ್ ಠಾಣೆಗಳಲ್ಲಿ ದೂರನ್ನು ಸಹ ದಾಖಲಿಸಲಾಗಿರುತ್ತದೆ ಎಂದು ತಿಳಿಸಿದೆ.
ಮುಂದುವರಿದು, ಎಲ್ಲಾ 4 ಜನ ಅಪರ ಜಿಲ್ಲಾ ಚುನಾವಣಾಧಿಕಾರಿಗಳಿಗೂ ಮತ್ತೊಮ್ಮೆ ಕೂಲಂಕುಷವಾಗಿ ಪರಿಶೀಲಿಸಿ ವಿಚಾರಣೆ ನಡೆಸಿ ವರದಿ ನೀಡಲು ಸೂಚಿಸಲಾಗಿರುತ್ತದೆ ಎಂಬುದಾಗಿ ಹೇಳಿದೆ.