ಬೆಂಗಳೂರು: ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಎಲ್ಲಾ ವಲಯಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲು ಸೂಚನೆ ನೀಡಿರುತ್ತಾರೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ವತಿಯಿಂದ ಎಲ್ಲಾ ವಲಯಗಳಲ್ಲಿ ಸ್ವಚ್ಚತಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ.
ಅದರಂತೆ, ಇಂದು ಬಿಬಿಎಂಪಿ 6 ವಲಯಗಳಲ್ಲಿ ವಲಯ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ರವರ ನೇತೃತ್ವದಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಜೆಸಿಬಿಗಳು, ಟ್ರ್ಯಾಕ್ಟರ್ ಗಳು ಹಾಗು ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಂಡು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. 6 ವಲಯಗಳಲ್ಲಿ ನಡೆಸಿರುವ ಸ್ವಚ್ಛತಾ ಕಾರ್ಯ ಹಾಗೂ ಪಾದಚಾರಿ ಮಾರ್ಗದ ಒತ್ತುವರಿ ತೆರವುಗೊಳಿಸಿರುವ ವಿವರಗಳು ಈ ಕೆಳಕಂಡತಿವೆ.
ಪೂರ್ವ ವಲಯ:
ಪೂರ್ವ ವಲಯ ಆಯುಕ್ತರಾದ ಸ್ನೇಹಲ್, ಮುಖ್ಯ ಅಭಿಯಂತರರಾದ ಸುಗುಣಾ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ವಚ್ಛತಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಸ್ತೆ ಮಾರ್ಗದಲ್ಲಿ ಹಾಳಾಗಿರುವ ಸ್ಲ್ಯಾಬ್ಸ್ ಗಳನ್ನು ಅಳವಡಿಸಲಾಗಿದೆ. ತ್ಯಾಜ್ಯವನ್ನು ತೆರವುಗೊಳಿ, ಪಾದಚಾರಿ ಮಾರ್ಗದಲ್ಲಿ ಅಡ್ಡಲಾಗಿರುವ ಮರದ ಕೊಂಬೆಗಳನ್ನು ತೆರವುಗೊಳಿಸಲಾಯಿತು.
ಪೂರ್ವ ವಲಯದಲ್ಲಿ ಹೊಸೂರು ಮುಖ್ಯ ರಸ್ತೆ ಆನೆಪಾಳ್ಯ ಜಂಕ್ಷನ್ ನಿಂದ ರೆಸಿಡೆನ್ಸಿ ರಸ್ತೆಯವರೆಗೆ ಎರಡೂ ಬದಿ ಸೇರಿದಂತೆ 4.4 ಕಿ.ಮೀ ರಸ್ತೆಯಲ್ಲಿ ಜೆಸಿಬಿಗಳು, ಟ್ರ್ಯಾಕ್ಟರ್ ಗಳು, ಅಗತ್ಯ ಸಿಬ್ಬಂದಿಯನ್ನು ಬಳಸಿಕೊಂಡು ಸ್ವಚ್ಚತಾ ಕಾರ್ಯ ನಡೆಸಲಾಯಿತು.
ಸರ್ವಜ್ಞನಗರ ವಿಭಾಗದ ಕಮ್ಮನಹಳ್ಳಿ ಮುಖ್ಯರಸ್ತೆ, ಕಮ್ಮನಹಳ್ಳಿ ಮುಖ್ಯ ರಸ್ತೆ, ಸುಬ್ಬಯ್ಯ ಪಾಳ್ಯದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲಾಗಿದೆ. ರಸ್ತೆ ಮದ್ಯಭಾಗದಲ್ಲಿರುವ ಮೀಡಿಯನ್ಸ್ ಗಳಲ್ಲಿ ಸ್ವಚ್ಛತೆ ಮಾಡಲಾಯಿತು.
ಪಶ್ಚಿಮ ವಲಯ:
ಜಗಜೀವನರಾಮ್ ನಗರದಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ನಡೆಯುತ್ತಿರುವ ಸ್ಥಳಕ್ಕೆ ವಲಯ ಜಂಟಿ ಆಯುಕ್ತರಾದ ಸಂಗಪ್ಪ ರವರು ಭೇಟಿ ನೀಡಿ, ಪರಿಣಾಮಕಾರಿಯಾಗಿ ಸ್ವಚ್ಛತಾ ಕಾರ್ಯವನ್ನು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜಾಜಿನಗರ 2 ಹಾಗೂ 3ನೇ ಅಡ್ಡರಸ್ತೆ ಮತ್ತು ತಿಮ್ಮಯ್ಯ ರಸ್ತೆಯಲ್ಲಿನ ಪಾದಚಾರಿ ಮಾರ್ಗದಲ್ಲಿನ ಅಡೆತಡೆಗಳನ್ನು ತೆರವುಗೊಳಿಸಲಾಯಿತು. ಜೊತೆಗೆ ರಾಜಾಜಿನಗರದ ವಾರ್ಡ್ 106 ರ ಇಂಡಸ್ಟ್ರಿಯಲ್ ಎಸ್ಟೇಟ್, ವಾರ್ಡ್ 47ರ ನಂದಿನಿ ಲೇಔಟ್, ಮಲ್ಲೇಶ್ವರಂ ವಿಭಾಗದ ವಾರ್ಡ್ 45 ಹಾಗೂ 65ರ ಪ್ರದೇಶದಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
ದಕ್ಷಿಣ ವಲಯ:
ವಿಜಯನಗರ ವಿಭಾಗದ ದೀಪಾಂಜಲಿ ನಗರ, ಮಡಿವಾಳ ಮಾರುಕಟ್ಟೆ ರಸ್ತೆ ಪ್ರದೇಶದಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ವಲಯ ಆಯುಕ್ತರಾದ ದಿಗ್ವಿಜಯ್ ಬೋಡ್ಕೆ, ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ ರವರು ಮಡಿವಾಳ ಮಾರುಕಟ್ಟೆ ರಸ್ತೆ ಭೇಟಿ ನೀಡಿ ಸ್ವಚ್ಛತಾ ಕಾರ್ಯವನ್ನು ಪರಿಶೀಲಿಸಿದರು.
ಕೆಂಪಾಂಬುದಿ ಕೆರೆ ಹಾಗೂ ಜಯನಗರ 9ನೇ ಬ್ಲಾಕ್ ರಸ್ತೆಯಲ್ಲಿ ಪಾದಚಾರಿ ಮಾರ್ಗದಲ್ಲಿ ತಳ್ಳುವ ಗಾಡಿ, ನಾಮಫಲಕಗಳನ್ನು ತೆರವುಗೊಳಿಸಲಾಯಿತು.
ಯಲಹಂಕ ವಲಯ:
ಥಣಿಸಂದ್ರ ಮುಖ್ಯರಸ್ತೆ, ರಮಣಶ್ರೀ ಕ್ಯಾಲಿಫೋರ್ನಿಯ ರೆಸಾರ್ಟ್ ನಿಂದ ಅಟ್ಟೂರು, ಅನಂತಪುರ ಮುಖ್ಯರಸ್ತೆವರೆಗೆ ಹಾಗೂ ಜಕ್ಕೂರು ಲೇಔಟ್ ಪ್ರದೇಶದಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ನಡೆಸಲಾಯಿತು.
ಇದೇ ವೇಳೆ ಕೋಪ್ಟಾ ಕಾಯ್ದೆ ಉಲ್ಲಂಘನೆ, ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡುವ ಕುರಿತಂತೆ ಮಳಿಗೆಗಳನ್ನು ಪರಿಶೀಲನೆ ನಡೆಸಲಾಯಿತು.
ರಾಜರಾಜೇಶ್ವರಿನಗರ ವಲಯ:
ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಕೆಂಗೇರಿ ವಿಭಾಗದ ಕೆಂಗೇರಿ ಬಸ್ ನಿಲ್ದಾಣ, ಮೈಸೂರು ರಸ್ತೆಯಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ನಡೆಸಿ, ಕೆಂಗೇರಿ ಕೆರೆಯ ಬಳಿಯ ಪಾದಚಾರಿ ಮಾರ್ಗದ ಪಕ್ಕದಲ್ಲಿ ಸಸಿಗಳನ್ನು ನೆಡಲಾಯಿತು.
ಬೊಮ್ಮನಹಳ್ಳಿ ವಲಯ:
ಬೇಗೂರಿನ ಮೈಕೋ ಲೇಔಟ್ ನಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ಕೈಗೊಂಡು ರಸ್ತೆ ಬದಿಯಿರುವ ತ್ಯಾಜ್ಯವನ್ನು ತೆರವುಗೊಳಿಸಲಾಯಿತು.
ಪಾಲಿಕೆ ವ್ಯಾಪ್ತಿಯಲ್ಲಿ ಇಂದು 6 ವಲಯಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ಇನ್ನುಳಿದ 2 ವಲಯಗಳಲ್ಲಿಯೂ ಸ್ವಚ್ಚತಾ ಕಾರ್ಯ ನಡೆಸಲಾಗುವುದು. ಸ್ವಚ್ಛತಾ ಕಾರ್ಯವು ಪಾಲಿಕೆಯ ಎಲ್ಲಾ 8 ವಲಯಗಳಲ್ಲಿಯೂ ನಿರಂತರವಾಗಿ ನಡೆಯಲಿದೆ.
ಇದು ರಾಜ್ಯದಲ್ಲೇ ಮೊದಲು: ಅಪಘಾತದ ಗಾಯಾಳುಗನ್ನು ಆಸ್ಪತ್ರೆಗೆ ದಾಖಲಿಸಲು ಶಾಸಕ ‘ಝೀರೋ ಟ್ರಾಫಿಕ್ಸ್’ ವ್ಯವಸ್ಥೆ
ಖ್ಯಾತ ಮರಾಠಿ ಹಿರಿಯ ನಟಿ ಜ್ಯೋತಿ ಚಾಂಡೇಕರ್ ಇನ್ನಿಲ್ಲ | Jyoti Chandekar is no more