ಉತ್ತರ ಕನ್ನಡ: ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ 40 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಕೊಳಗಿಬೀಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ಎರಡು ಬಸ್ಸುಗಳ ಮುಖಾಮುಖಿ ಡಿಕ್ಕಿಯಿಂದಾಗಿ ಬಸ್ ಮುಂಭಾಗವು ಸಂಪೂರ್ಣವಾಗಿ ಜಖಂ ಆಗಿದೆ. ಅಪಘಾತದಿಂದಾಗಿ 40 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿರಸಿಯ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.
ಇನ್ನೂ ಕರ್ನಾಟಕ ವಿಧಾನಮಂಡಲ ಕಾಗದ ರಹಿತ ಸದನ: ‘ಡಿಜಿಟಲ್ ಸದನ’ಕ್ಕೆ ಅಧಿಕೃತ ಚಾಲನೆ
BREAKING: ಮೈಸೂರು ಜಿಲ್ಲಾಧಿಕಾರಿಗೆ ಸಂಕಷ್ಟ: ಬಂಧನದ ವಾರೆಂಟ್ ಜಾರಿ ಮಾಡಿದ ನ್ಯಾಯಾಲಯ!








