ಬೆಂಗಳೂರು: ಗುಂಡ್ಲುಪೇಟೆಯಲ್ಲಿ ಸಚಿವ ವಿ. ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ಮಹಿಳಾ ಆಯೋಗಕ್ಕೆ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ದೂರು ನೀಡಿದೆ.
ವಿ ಸೋಮಣ್ಣ ಅವರು ಹಕ್ಕು ಪತ್ರ ವಿತರಣಾ ಕಾರ್ಯಕ್ರಮದ ಸಂದರ್ಭದಲ್ಲಿ ಮಹಿಳೆಯೊಬ್ಬರು ಮನವಿ ಪತ್ರ ಸಲ್ಲಿಸಲು ಬರುತ್ತಿದ್ದ ಸಂದರ್ಭದಲ್ಲಿ ಕೋಪಗೊಂಡು ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಸ್ಥಳದಲ್ಲೇ ಇದ್ದ ಅಧಿಕಾರಿ ವರ್ಗ ಹಾಗೂ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ಮಹಿಳಾ ಆಯೋಗ ಕೂಡಲೇ ಪ್ರಕರಣ ದಾಖಲಿಸಿಕೊಂಡು ನಿಷ್ಪಕ್ಷಪಾತವಾಗಿ ಈ ಪ್ರಕರಣವನ್ನು ತನಿಖೆ ನಡೆಸಬೇಕು. ಮಹಿಳೆ ಮೇಲೆ ಹಲ್ಲೆ ನಡೆಸಿರುವ ಪ್ರಕರಣದಲ್ಲಿ ಕಾನೂನು ರೀತಿಯ ಕ್ರಮವನ್ನು ಸಚಿವ ವಿ ಸೋಮಣ್ಣ ವಿರುದ್ಧ ತೆಗೆದುಕೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ವೈ ಪುಟ್ಟರಾಜು ಮಹಿಳಾ ಆಯೋಗದ ಅಧ್ಯಕ್ಷರಿಗೆ ದೂರು ಸಲ್ಲಿಸಿ ಸಚಿವರ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ದೀಪಾವಳಿ ಹಬ್ಬದ ದಿನ ‘ಅಗ್ನಿ ದುರಂತ’ ತಪ್ಪಿಸಲು ಈ ನಿಯಮಗಳ ಪಾಲನೆ ಕಡ್ಡಾಯ |Diwali 2022
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ‘ಪಟಾಕಿ’ ಅವಘಡ : 24 ಕ್ಕೂ ಹೆಚ್ಚು ಮಂದಿಗೆ ಗಾಯ : ಆಸ್ಪತ್ರೆಗೆ ದಾಖಲು