ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ, ಕನ್ನಡದ ಹಾಸ್ಯ ನಟ ಚಿಕ್ಕಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಅವರನ್ನು ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಅನ್ನೋ ಸುದ್ದಿಗಳು ಹರಿದಾಡುತ್ತಿದೆ. ಈ ನಡುವೆ ಈ ಬಗ್ಗೆ ಖುದ್ದು ಹಾಸ್ಯ ನಟ ಚಿಕ್ಕಣ್ಣ ಅವರು ಸಿನಿಮಾ ಚಿತ್ರೀಕರಣ ಸ್ಥಳದಿಂದಲೇ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ತಮ್ಮ ಆರೋಗ್ಯದ ಬಗ್ಗೆ ತಿಳಿಸಿದ್ದಾರೆ.

ನನಗೆ ಏನು ಆಗಿಲ್ಲ… ಆರೋಗ್ಯ ಸರಿಯಾಗಿದೆ. ಸದ್ಯ ‘ಉಪಾಧ್ಯಕ್ಷ’ ಸಿನಿಮಾ ಶೂಟಿಂಗ್​ನಲ್ಲಿ ಇದ್ದೇನೆ. ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಥ್ಯಾಂಕ್ಸ್​ ಕಣ್ರಪ್ಪ ನಿಮಗೆ’ ಎಂದು ಅವರು ಹೇಳಿದ್ದಾರೆ.

Share.
Exit mobile version