ಶ್ರೀನಿವಾಸಪುರ : ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ದೊಡ್ಡ ಪ್ರಮಾಣದಲ್ಲಿ ʻಕಮಿಷನ್‌ ದಂಧೆʼ ನಡೆಯುತ್ತಿದೆ ಮಾಜಿ ಎಂಎಲ್‌ ಸಿ ವೈ.ಎ. ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ದೊಡ್ಡ ಪ್ರಮಾಣದಲ್ಲಿ ಕಮಿಷನ್‌ ದಂಧೆ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಂಕಷ್ಟ ಎದುರಾಗಿದೆ. ರಾಜ್ಯದ ಜನರು ಬಹಳಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಜನರ ಕಾರ್ಯಕ್ರಮಗಳ ಬದಲು ಬರೀ ರಾಜಕಾರಣ ಮಾಡುತ್ತಿದ್ದಾರೆ. ೧೪ ತಿಂಗಳಿಂದ ೧೦ ವಿವಿಧ ರೀತಿಯಲ್ಲಿ ತೆರಿಗೆ ಹೆಚ್ಚಳ ಮಾಡಲಾಗಿದೆ. ಈ ಸರ್ಕಾರಕ್ಕೆ ಬಡವರು, ಜನರ ಬಗ್ಗೆ ಕಾಳಜಿ ಇಲ್ಲ ಎಂದು ಕಿಡಿಕಾರಿದ್ದಾರೆ.

Share.
Exit mobile version