ಬೆಂಗಳೂರು: ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ ಮಹಿಳಾ ಡಾಕ್ಟರ್ ಮೇಲಿನ ಅತ್ಯಾಚಾರ, ಕೊಲೆಯಿಂದಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಬೆಂಗಳೂರಲ್ಲಿ ಮಹಿಳೆಯರ ಸುರಕ್ಷತೆಗಾಗಿ ಮಹತ್ವದ ಕ್ರಮವನ್ನು ವಹಿಸಲಾಗಿದೆ. ಬೆಂಗಳೂರಿನ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ರಾತ್ರಿ ವೇಳೆಯಲ್ಲಿ ಇಬ್ಬರು ಪೊಲೀಸ್ ಪೇದೆಗಳನ್ನು ಡ್ಯೂಟಿಗೆ ನಿಯೋಜಿಸುವಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.
ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಜಂಟಿ ಪೊಲೀಸ್ ಆಯುಕ್ತರಾದಂತ ಎಂಎನ್ ಅನುಚೇತ್ ಅವರು ಜ್ಞಾಪನ ಆದೇಶವನ್ನು ಎಲ್ಲಾ ಸಂಚಾರ ವಿಭಾಗದ ಪಿಐಗಳಿಗೆ ಹೊರಡಿಸಿದ್ದಾರೆ. ಅದರಲ್ಲಿ ಬೆಂಗಳೂರು ನಗರದಲ್ಲಿ ರಾತ್ರಿ ವೇಳೆಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ದೂರುಗಳು ಹೆಚ್ಚಾಗುತ್ತಿವೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ಈ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವ ಸಲುವಾಗಿ, ಸಂಚಾರ ವಿಭಾಗದ ಎಲ್ಲಾ ಸಂಚಾರ ಪೊಲೀಸ್ ಠಾಣೆಗಳಲ್ಲಿ ಪ್ರತಿ ದಿನ ರಾತ್ರಿ ಕರ್ತವ್ಯಕ್ಕೆ ಇಬ್ಬರು ಮಹಿಳಾ ಹೆಚ್ ಸಿ, ಪಿಸಿ ಸಿಬ್ಬಂದಿಗಳನ್ನು ಕಡ್ಡಾಯವಾಗಿ ನಿಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
BREAKING : ರಾಜ್ಯದಲ್ಲಿ `ಬೈಕ್ ವ್ಹೀಲಿಂಗ್’ ಹುಚ್ಚಾಟಕ್ಕೆ ಮತ್ತೊಂದು ಬಲಿ : ಚಿಕಿತ್ಸೆ ಫಲಿಸದೇ ಅರ್ಚಕ ಸಾವು!
`Flipkart’ ಗ್ರಾಹಕರಿಗೆ ಬಿಗ್ ಶಾಕ್ : ವಸ್ತುಗಳ `ಆರ್ಡರ್’ ಮೇಲಿನ ಶುಲ್ಕ ಹೆಚ್ಚಳ!