ಮಂಡ್ಯ : ಇತ್ತಿಚಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಸೊಗಡು ಕಣ್ಮರೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಮಾಜಿ ಶಾಸಕ ಎಂ.ಶ್ರೀನಿವಾಸ್ ಗುರುವಾರ ಹೇಳಿದರು.
ಮದ್ದೂರು ತಾಲೂಕಿನ ಕೆ. ಹೊನ್ನಲಗೆರೆ ಆರ್.ಕೆ. ಸಮೂಹ ಶಿಕ್ಷಣ ಸಂಸ್ಥೆ ಆವರಣದಲ್ಲಿ ಮಂಡ್ಯ ಕರ್ನಾಟಕ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಬಿ.ರಾಮಕೃಷ್ಣ ಪ್ರಶಸ್ತಿ – 2026 ಪ್ರಧಾನ ಮಾಡಿ ಅವರು ಮಾತನಾಡಿದರು.
ದೇಶಿಯ ಸಂಸ್ಕೃತಿಯಾದ ನಾಡಿನ ಕಲೆ, ಸಾಹಿತ್ಯ, ಜಾನಪದ ಸೊಗಡಿನ ಬಗ್ಗೆ ಗ್ರಾಮೀಣ ಪ್ರದೇಶಗಳ ಯುವಕರಲ್ಲಿ ಕಣ್ಮರೆಯಾಗುತ್ತಿದ್ದು, ಹೀಗಾಗಿ ಮಕ್ಕಳಿಗೆ ಹೆಚ್ಚು ಹೆಚ್ಚು ಅಧ್ಯಯನ ನಡೆಸುವ ಮೂಲಕ ದೇಶಿಯ ಸಂಸ್ಕೃತಿಯನ್ನು ಮತ್ತಷ್ಟು ಗಟ್ಟಿಗೊಳಿಸಲು ಮುಂದಾಗಬೇಕೆಂದು ಹೇಳಿದರು.
ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಮಾತನಾಡಿ, ನೈತಿಕ ದಾರಿದ್ರ್ಯ ಶಿಕ್ಷಣ ಕ್ಷೇತ್ರದಲ್ಲಿ ಇರಬಾರದು. ಎಲ್ಲರಲ್ಲೂ ನಿರೀಕ್ಷೆಗಳು ಹೆಚ್ಚಿವೆ. ಬಂಧುತ್ವ ಎನ್ನುವುದು ಮರೆಯಾಗುತ್ತಿದೆ. ತಂದೆ, ತಾಯಿ, ಅಣ್ಣ ತಮ್ಮಂದಿರ ನಡುವೆ ಸಂಘರ್ಷಗಳು ಹೆಚ್ಚುತ್ತಿವೆ. ಎಲ್ಲರಲ್ಲೂ ಸಾಮರಸ್ಯ ಹಾಳಾಗಿದೆ ಎಂದು ವಿಷಾದಿಸಿದರು.
ಜನಪದ ವಿದ್ವಾಂಸ ಡಾ.ಚಿಕ್ಕಣ್ಣ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕಗಳಿಕೆಗಷ್ಟೆ ಸೀಮಿತವಾಗಬಾರದು ಗುಣಮಟ್ಟದ ಬದುಕನ್ನು ರೂಪಿಸಿಕೊಂಡು ಸನ್ಮಾರ್ಗದತ್ತ ಹೆಜ್ಜೆಯಿಡುವುದೇ ಅತೀ ಮುಖ್ಯವಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ಅವರು ಮಾತನಾಡಿ, ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸುವುದು ಎಂದರೆ ಸುಲಭದ ಮಾತಲ್ಲ. ಅಂತಹ ಕಷ್ಟದ ಕೆಲಸಕ್ಕೆ ಕೈ ಹಾಕಿ ಯಶಸ್ವಿಗೊಂಡಿರುವ ಬಿ.ರಾಮಕೃಷ್ಣ ಅವರಿಗೆ ಪ್ರಶಸ್ತಿ ಸಲ್ಲಬೇಕು ಎಂದು ಅಭಿಪ್ರಾಯಪಟ್ಟರು.
ಲೇಖಕ ಡಾ.ಎಸ್.ತುಕಾರಾಂ ಅವರು ಪ್ರಾಸ್ತಾವಿಕ ಮಾತನಾಡಿದರು. ನಿವೃತ್ತ ಪ್ರಾಂಶುಪಾಲ ಎಸ್.ಬಿ. ಶಂಕರಗೌಡ ಅಭಿನಂದನಾ ನುಡಿಗಳನ್ನಾಡಿದರು.
ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಶಸ್ತಿ ಪ್ರದಾನ
ತುಮಕೂರು ಜಿಲ್ಲೆಯ ಜಾನಪದ ವಿದ್ವಾಂಸ ಚಿಕ್ಕಣ್ಣ ಯಣ್ಣೆಕಟ್ಟೆ, ಮಂಡ್ಯ ಜಿಲ್ಲೆಯ ಕೊತ್ತತ್ತಿ ವಿದ್ಯಾಗಣಪತಿ ವಿದ್ಯಾಸಂಸ್ಥೆಗೆ 50 ಸಾವಿರ ರೂ ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡ ಬಿ. ರಾಮಕೃಷ್ಣ -2026 ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಆರ್.ಕೆ. ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ರಾಮಕೃಷ್ಣ, ಕಾರ್ಯದರ್ಶಿ ಪಿ. ಚಂದ್ರಕಲಾ, ವ್ಯವಸ್ಥಾಪಕ ನಿರ್ದೇಶಕ ವಿನಯ್ ರಾಮಕೃಷ್ಣ, ಸಿಇಒ ಕೀರ್ತನಾ ರಾಮಕೃಷ್ಣ, ಬಿಇಓ ಧನಂಜಯ, ಆಡಳಿತಾಧಿಕಾರಿ ಎಂ.ಎಸ್. ಮರಿಸ್ವಾಮಿಗೌಡ, ಪ್ರಾಂಶುಪಾಲ ಡಾ.ಎಂ.ಸಿ.ಸತೀಶಬಾಬು, ಎಂ.ಎನ್. ರಮೇಶ್, ಅನಸೂಯ, ಪ್ರವೀಣ್, ಪ್ರಭಾವತಿ, ಅನಿರೀಕ್ಷಿತಾ, ಎ ಜಿ. ಚಂದ್ರು, ಮುತ್ತಲಿಂಗಯ್ಯ, ಎಸ್.ಡಿ.ಅರುಣ, ಪಾವನಾ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ
ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ








