ಬೆಂಗಳೂರು: ಕೋಲ್ಕತ್ತಾದಲ್ಲಿನ ಆಸ್ಪತ್ರೆಯೊಂದರ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತ್ರ ಕರ್ನಾಟಕದಲ್ಲಿ ಮಹಿಳಾ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ತಡೆಗೆ ಸಮಿತಿಯನ್ನು ರಚಿಸಲಾಗಿದೆ.
ರಾಜ್ಯದ ವೈದ್ಯರ ಸುರಕ್ಷತೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ನೀಡಲು ಕಾರ್ಯಪಡೆ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೊಲ್ಕತ್ತಾ ಟ್ರೈನಿ ವೈದ್ಯಯ ಮೇಲೆ ಅತ್ಯಾಚಾರ ನಡೆದ ಘಟನೆಯ ಹಿನ್ನೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ವೈದ್ಯಕೀಯ ಸಂಘಟನಗಳ ಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದು, ಅವರ ಸುರಕ್ಷೆಗೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದರು.
ವಿವಿಧ ವೈದ್ಯ ಸಂಘಟನೆಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಸಚಿವರು, ಈ ಕಾರ್ಯಪಡೆ ವೈದ್ಯರ ಸುರಕ್ಷತೆ ಬಗ್ಗೆ ಕೈಗೊಳ್ಳಬೇಕಾದ ಕ್ರಮ, ಕಾನೂನುಗಳ ಅನುಷ್ಠಾನ ಸೇರಿ ಎಲ್ಲಾ ಆಯಾನಗಳಲ್ಲಿ ವೈದ್ಯರ ಭದ್ರತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಒಂದು ತಿಂಗಳಲ್ಲಿ ವರದಿ ಪಡೆಯಲು ಸಭೆಯಲ್ಲಿ ನಿರ್ಧರಿಸಲಾಗಿದೆ. ವೈದ್ಯಕೀಯ ಸಂಘಟನೆಯವರು ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕಾರ್ಯಪಡೆಯಲ್ಲಿರಲಿದ್ದಾರೆ ಎಂದು ತಿಳಿಸಿದರು.
ಇತ್ತೀಚೆಗೆ ಕೋಲ್ಕತ್ತಾ ಘಟನೆ ದೇಶದ ಗಮನ ಸೆಳೆದಿದೆ. ಘಟನೆ ಇಡೀ ದೇಶದಲ್ಲಿನ ಅಭದ್ರತೆ, ಮಹಿಳೆಯರ ರಕ್ಷಣೆ ಬಗ್ಗೆ ಜಾಗೃತಿ ಮೂಡಿದೆ. ವೈದ್ಯಕೀಯ ಕ್ಷೇತ್ರದಲ್ಲಿ 50% ಕ್ಕಿಂತ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಅವರು ಭಯದ ವಾತಾವಾರಣದಲ್ಲಿ ಕೆಲಸ ಮಾಡುವುದು ಕಷ್ಟ. ಈ ನಿಟ್ಟಿನಲ್ಲಿ ಇಂದು ಸಭೆ ನಡೆಸಿದ್ದೇವೆ. 10-12 ವಿವಿಧ ಸಂಘಟನೆಗಳು ಸಭೆಯಲ್ಲಿ ಭಾಗವಹಿಸಿದ್ದವು. ಕರ್ತವ್ಯ ನಿರತ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗೆ ಭದ್ರತೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಭದ್ರತೆ ಹೆಚ್ಚಿಸುವ ಬಗ್ಗೆ ಸಲಹೆ ಕೊಟ್ಟಿದ್ದಾರೆ. ಮುಂಜಾಗ್ರತಾ ಕ್ರಮಗಳ ಬಗ್ಗೆ ಕ್ರಮಕ್ಕೆ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.
ವೈದ್ಯರ ರಕ್ಷಣೆಗೆ ಅನೇಕ ಕಾನೂನುಗಳು ಇವೆ. ವೈದ್ಯರಿಗೆ ಹಲ್ಲೆ ಮಾಡುವವರಿಗೆ 3-7 ವರ್ಷ ವರೆಗೆ ಶಿಕ್ಷೆ ವಿಧಿಸುವ ತಿದ್ದುಪಡಿ ತರಲಾಗಿದೆ. ಪ್ರಸ್ತುತ ಇದ್ದ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಈ ಬಗ್ಗೆ ನಿನ್ನೆ ಅಧಿಸೂಚನೆ ಹೊರಡಿಸಲಾಗಿದೆ. ಜನರಿಗೆ ಈ ಕಾನೂನು ಬಗ್ಗೆ ಮಾಹಿತಿ ಕೊಡುವ ಬಗ್ಗೆ ವೈದ್ಯರು ಸಲಹೆ ನೀಡಿದ್ದಾರೆ. ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮೆರಾ, ರಿಸ್ಟ್ ಬ್ಯಾಂಡ್, ಪ್ಯಾನಿಕ್ ಬಟನ್, ಪೊಲೀಸ್ ಇಲಾಖೆ ಜೊತೆ ಸಂಪರ್ಕಿಸಿ ಆವಾಗ ಆವಾಗ ಭೇಟಿ ನೀಡಿ ಪರೀಶೀಲನೆ, ಕೇಸ್ ಗಳ ಇತ್ಯರ್ಥವನ್ನು ಫಾಸ್ಟ್ ಟ್ಯ್ರಾಕ್ ಮಾಡುವ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ ಎಂದರು.
ಈ ಎಲ್ಲಾ ಸಲಹೆ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ವೈದ್ಯರ ಸುರಕ್ಷತೆಗೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ವರದಿ ನೀಡಲು ಕಾರ್ಯಪಡೆ ರಚಿಸಲು ತೀರ್ಮಾನಿಸಲಾಗಿದೆ. ಆ ವರದಿ ಆಧಾರದಲ್ಲಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
‘ಬಿಜೆಪಿ’ಯವರ ಮಾತು ಕೇಳಿ ’15 ಬಿಲ್’ಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ: ಡಿ.ಕೆ ಶಿವಕುಮಾರ್ ಕಿಡಿ
ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು: ಶರಣ ಪ್ರಕಾಶ್ ಪಾಟೀಲ್