ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹತದಲ್ಲಿ ಕೈದಿಗಳಿಗೆ ರಾಜಾತಿಥ್ಯದ ವೀಡಿಯೋ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಕೈದಿಗಳಿಗೆ ಲಗಾಮು ಹಾಕಲು ಎಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆಯನ್ನು ಮಾಡಿರುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಇಂದು ಈ ಸಂಬಂಧ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇನ್ನು ಮುಂದೆ ಈ ರೀತಿಯ ಪ್ರಕರಣ ಮರುಕಳಿಸದೆ ಇರಲು ಎಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದೇವೆ ಎಂದು ಹೇಳಿದರು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇನ್ನು ಮುಂದೆ ಈ ರೀತಿಯ ಪ್ರಕರಣ ಮರುಕಳಿಸದೆ ಇರಲು ಎಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದೇವೆ ಎಂದು ಗೃಹ ಸಚಿವರಾದ… pic.twitter.com/LDm2vxMCBy
— DIPR Karnataka (@KarnatakaVarthe) November 10, 2025
ಜನಿಬಿಡ ಜಂತರ್ ಮಂತರ್‌ನಲ್ಲಿ ಹಾಡಹಗಲೇ ವ್ಯಕ್ತಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
BREAKING: ಬೆಂಗಳೂರಲ್ಲಿ ಸ್ನೇಹಿತೆಯ ಸಾವಿನಿಂದ ಮನನೊಂದು 9ನೇ ತರಗತಿ ಬಾಲಕಿ ಆತ್ಮಹತ್ಯೆ








