ಬೆಂಗಳೂರು: ನಿನ್ನೆ ತನ್ನ ಕಷ್ಟವನ್ನು ಹೇಳಿಕೊಳ್ಳಲು ಆಗಮಿಸಿದಂತ ಮಹಿಳೆಯೊಬ್ಬರಿಗೆ, ವಸತಿ ಸಚಿವ ವಿ.ಸೋಮಣ್ಣ ಕಪಾಳ ಮೋಕ್ಷ ಮಾಡಿದ ವೀಡಿಯೋ ಸಖತ್ ವೈರಲ್ ಆಗಿತ್ತು. ಈ ಬಳಿಕ ಮಹಿಳೆಯ ಕ್ಷಮೆ ಕೇಳಿದಂತ ಘಟನೆ ಕೂಡ ನಡೆದಿತ್ತು. ಈ ಪ್ರಕರಣದಲ್ಲಿ ವಿ.ಸೋಮಣ್ಣ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದೆ.
ವಿ.ಸೋಮಣ್ಣ ಅವರು ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು. ಸರ್ಕಾರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದೆ.
ವಸತಿ ಸಚಿವ ವಿ.ಸೋಮಣ್ಣ ಚಾಮರಾಜನಗರದಲ್ಲಿ ವಿವಿಧ ಕಾರ್ಯಕ್ರಮದ ನಿಮಿತ್ತ ತೆರಳಿದಂತ ಸಂದರ್ಭದಲ್ಲಿ, ಪರಿಶಿಷ್ಟ ಮಹಿಳೆಯೊಬ್ಬರು ತಮಗೆ ನಿವೇಶನ ಹಂಚಿಕೆ ಆಗಿಲ್ಲ. ದಯವಿಟ್ಟು ಕೊಡಿಸುವಂತೆ ಮನವಿ ಮಾಡಿಕೊಳ್ಳಲು ಮುಂದಾಗಿದ್ದರು. ಅಲ್ಲದೇ ಸಚಿವರ ಕಾಲಿಗೆ ಬಿದ್ದು ಕೇಳಿಕೊಂಡಿದ್ದರು.
ಮಹಿಳೆಯ ವರ್ತನೆಯಿಂದ ಸಿಡಿಮಿಡಿಗೊಂಡಂತ ವಸತಿ ಸಚಿವ ವಿ.ಸೋಮಣ್ಣ ಅವರು ದಿಢೀರ್ ಮಹಿಳೆಯ ಕೆನ್ನೆಗೆ ಬಾರಿಸಿ ಕಪಾಳ ಮೋಕ್ಷ ಮಾಡಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಪಕ್ಷಗಳ ನಾಯಕರು ಸೇರಿದಂತೆ ಸಾರ್ವಜನಿಕರು ಸಚಿವರ ಈ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದರು.
BIG NEWS : ಉತ್ತರಪ್ರದೇಶದಲ್ಲಿ ಪಟಾಕಿ ತಯಾರಿಕಾ ಮನೆಯಲ್ಲಿ ಸ್ಫೋಟ : ಮಹಿಳೆ ಸಾವು, ವ್ಯಕ್ತಿಗೆ ಗಾಯ
‘ಭಾರತ ಒಂದಾಗಲಿ, ಐಕ್ಯತೆ ನಮ್ಮ ಮಂತ್ರವಾಗಲಿ’ : ರಾಜ್ಯದ ಜನತೆಗೆ ದೀಪಾವಳಿ ಶುಭಾಶಯ ಕೋರಿದ ಸಿದ್ದರಾಮಯ್ಯ
BIGG NEWS : ಬ್ರಿಟನ್ ಪ್ರಧಾನಿಯಾದ ‘ರಿಷಿ ಸುನಕ್’ ; ‘ಭಗವದ್ಗೀತೆ’ ಮೇಲೆ ಕೈಯಿಟ್ಟು ಪ್ರಮಾಣ ವಚನ