Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `ವಿಕಲಚೇತನ ಆರೈಕೆದಾರರಿಗೆ’ ಗುಡ್ ನ್ಯೂಸ್ : 1000 ರೂ.ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

06/06/2025 7:25 AM
vidhana soudha

ರಾಜ್ಯ ಸರ್ಕಾರದಿಂದ `ಕಾಡುಗೊಲ್ಲ ಸಮುದಾಯದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.!

06/06/2025 7:22 AM

BIG NEWS : ರಾಜ್ಯ ಸರ್ಕಾರದಿಂದ ‘ಅನರ್ಹ ಪಡಿತರ ಚೀಟಿ’ದಾರರಿಗೆ ಬಿಗ್ ಶಾಕ್ : ಶೀಘ್ರವೇ ಥರ್ಡ್ ಪಾರ್ಟಿ ಸಮೀಕ್ಷೆ.!

06/06/2025 7:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಪಾನ್, ದಕ್ಷಿಣ ಕೊರಿಯಾದ ಕಂಪನಿಗಳಿಂದ ₹6,450 ಕೋಟಿ ಹೂಡಿಕೆ; 1,000ಕ್ಕೂ ಹೆಚ್ಚು ಉದ್ಯೋಗಾವಕಾಶ ಸೃಷ್ಟಿ
KARNATAKA

ಜಪಾನ್, ದಕ್ಷಿಣ ಕೊರಿಯಾದ ಕಂಪನಿಗಳಿಂದ ₹6,450 ಕೋಟಿ ಹೂಡಿಕೆ; 1,000ಕ್ಕೂ ಹೆಚ್ಚು ಉದ್ಯೋಗಾವಕಾಶ ಸೃಷ್ಟಿ

By kannadanewsnow0910/07/2024 2:44 PM

ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ಜಪಾನ್ ಮತ್ತು ದಕ್ಷಿಣ ಕೊರಿಯಾದ ಎರಡು ವಾರಗಳ ಭೇಟಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ₹6,450 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಬದ್ಧತೆ ಪಡೆದುಕೊಂಡಿದೆ. ಈ ಬದ್ಧತೆ ಹಾಗೂ ಒಪ್ಪಂದಗಳ ಫಲವಾಗಿ ರಾಜ್ಯದಲ್ಲಿ 1,000 ಉದ್ಯೋಗ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.

ಉಭಯ ದೇಶಗಳ ಭೇಟಿಯ ಫಲಶ್ರುತಿ ಬಗ್ಗೆ ಬುಧವಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ಹಂಚಿಕೊಂಡ ಸಚಿವ ಪಾಟೀಲ ಅವರು, ‘ಜೂನ್ 24ರಿಂದ ಜುಲೈ 5ರವರೆಗಿನ ಉಭಯ ದೇಶಗಳ ಎರಡು ವಾರಗಳ ಭೇಟಿಯ ಸಮಯದಲ್ಲಿ, ಕರ್ನಾಟಕದ ನಿಯೋಗವು ಅಲ್ಲಿನ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗಾಗಿ (ಎಸ್‌ಎಂಇ) ಬಂಡವಾಳ ಹೂಡಿಕೆ ರೋಡ್‌ಷೋಗಳನ್ನು ನಡೆಸಿತು. ತಯಾರಿಕಾ ವಲಯಕ್ಕೆ ರಾಜ್ಯದಲ್ಲಿ ಇರುವ ಉತ್ತೇಜಕರ ಪೂರಕ ಸೌಲಭ್ಯಗಳ ಮಾಹಿತಿ ವಿನಿಮಯ ಮಾಡಿಕೊಂಡಿತುʼ ಎಂದು ಹೇಳಿದರು.

ʼ35 ಉದ್ಯಮಗಳ ಪ್ರಮುಖರನ್ನು ಭೇಟಿ ಮಾಡಿದ ನಿಯೋಗವು, ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ – ʼಇನ್ವೆಸ್ಟ್ ಕರ್ನಾಟಕ 2025ʼರಲ್ಲಿ ಭಾಗವಹಿಸಲು ಟೋಕಿಯೊ ಮತ್ತು ಸೋಲ್‌ನಲ್ಲಿ ನಡೆದ ರೋಡ್‌ ಷೋಗಳಲ್ಲಿ 200ಕ್ಕೂ ಹೆಚ್ಚು ಕಂಪನಿಗಳಿಗೆ ಆಹ್ವಾನ ನೀಡಲಾಯಿತುʼ ಎಂದರು.

ʼಜಪಾನ್‌ನಲ್ಲಿ ನಡೆದ ಸಭೆಗಳಲ್ಲಿ ರೆನೆಸಾಸ್ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್, ಟೊಯೊಟಾ ಮೋಟರ್ ಕಾರ್ಪೊರೇಷನ್, ಯಮಹಾ ಮೋಟರ್ ಕಂಪನಿ, ಸುಮಿಟೊಮೊ ಹೆವಿ ಇಂಡಸ್ಟ್ರೀಸ್, ಪ್ಯಾನಾಸೋನಿಕ್ ಎನರ್ಜಿ, ನಿಡೆಕ್ ಕಾರ್ಪೊರೇಷನ್, ನಿಸಾನ್ ಮೋಟರ್ ಕಾರ್ಪೊರೇಷನ್, ಬ್ರದರ್ ಇಂಡಸ್ಟ್ರೀಸ್, ಶಿಮಾಡ್ಜು ಕಾರ್ಪೊರೇಷನ್, ಹಿಟಾಚಿ ಮತ್ತಿತರ ಕಂಪನಿಗಳು ಪ್ರಮುಖವಾಗಿವೆ.

ʼದಕ್ಷಿಣ ಕೊರಿಯಾದಲ್ಲಿ ವ್ಯಾಪಾರ, ಕೈಗಾರಿಕೆ ಮತ್ತು ಇಂಧನ ಸಚಿವಾಲಯದ ಉಪ ಮಂತ್ರಿ, ಕೊರಿಯಾದ ಜಿಯೊಂಗಿ ಪ್ರಾಂತ್ಯದ ವೈಸ್‌ ಗವರ್ನರ್ ಮತ್ತು ಸೋಲ್‌ ಮೆಟ್ರೊಪಾಲಿಟನ್ ಸರ್ಕಾರದಲ್ಲಿ ಆರ್ಥಿಕ ನೀತಿಯ ಉಪ ಮೇಯರ್ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಸಭೆಗಳನ್ನು ನಡೆಸಲಾಯಿತು.

ʼದಕ್ಷಿಣ ಕೊರಿಯಾದಲ್ಲಿ ನಡೆದ ಸಭೆಗಳಲ್ಲಿ ಸ್ಯಾಮ್ಸಂಗ್‌ ಎಲೆಕ್ಟ್ರಾನಿಕ್ಸ್‌, ಎಲ್‌ಜಿ ಎನರ್ಜಿ ಸೊಲ್ಯೂಷನ್ಸ್, ಎಲ್‌ಎಕ್ಸ್‌ ಎಲೆಕ್ಟ್ರಾನಿಕ್ಸ್, ನಿಫ್ಕೊ ಕೊರಿಯಾ, ಒಸಿಐ ಹೋಲ್ಡಿಂಗ್ಸ್, ಕ್ರಾಫ್ಟನ್‌, ಎಚ್‌ವೈಎಸಿ, ಹುಂಡೈ ಮೋಟರ್ಸ್‌, ವೈಜಿ-1, ಹೊಯ್ಸಂಗ್‌ ಅಡ್ವಾನ್ಸಡ್‌ ಮಟೇರಿಯಲ್ಸ್‌ ಮುಂತಾದವು ಸೇರಿವೆʼ ಎಂದು ಸಚಿವ ಪಾಟೀಲ ವಿವರಿಸಿದರು.

ಹೂಡಿಕೆ ಬದ್ಧತೆಗಳು & ಒಪ್ಪಂದಗಳ ವಿವರ:

•ಒಸಾಕಾ ಗ್ಯಾಸ್: ಜಪಾನಿನ ಪ್ರಮುಖ ಇಂಧನ ಕಂಪನಿಯಾಗಿರುವ ಒಸಾಕಾ ಗ್ಯಾಸ್, ಮುಂದಿನ 5 ವರ್ಷಗಳಲ್ಲಿ ಅನಿಲ ವಿತರಣಾ ಮೂಲಸೌಲಭ್ಯ ವಿಸ್ತರಿಸಲು ₹5000 ಕೋಟಿ (600 ದಶಲಕ್ಷ ಡಾಲರ್‌) ಮೊತ್ತದ ಬಂಡವಾಳ ಹೂಡಿಕೆ ಮಾಡಲು ಬದ್ಧತೆ ತೋರಿದೆ.

• ಡಿಎನ್‌ ಸೊಲ್ಯೂಷನ್ಸ್: ಕೊರಿಯಾದ ಮಷಿನ್ ಟೂಲ್ಸ್ ಕಂಪನಿಯಾಗಿರುವ ಡಿಎನ್‌ ಸೊಲ್ಯೂಷನ್ಸ್‌, ಕೈಗಾರಿಕಾ ಯಂತ್ರೋಪಕರಣಗಳು ಮತ್ತು ಸ್ವಯಂಚಾಲಿತ ವ್ಯವಸ್ಥೆಗಳ ತಯಾರಿಕಾ ಘಟಕ ಸ್ಥಾಪಿಸಲು ₹1000 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ.
• ಅವೊಯಮಾ ಸೈಸಕುಶೊ : ವಾಹನ ಬಿಡಿಭಾಗಗಳನ್ನು ಪೂರೈಸುವ ಜಪಾನಿನ ಅವೊಯಮಾ ಸೈಸಕುಶೊ, ತುಮಕೂರು ಬಳಿಯ ಜಪಾನ್‌ ಕೈಗಾರಿಕಾ ಟೌನ್‌ಶಿಪ್‌ನಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ₹210 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ.

• ಡೈಕಿ ಆ್ಯಕ್ಸಿಸ್‌, ಹೈವಿಷನ್‌ ಮತ್ತು ಇಎಂಎನ್‌ಐ ಕಂಪನಿ ಲಿಮಿಟೆಡ್‌ : ಬ್ಯಾಟರಿ ಸೆಲ್‌ಗಳ ಸಂಗ್ರಹ ಮತ್ತು ಪರೀಕ್ಷಾ ಕೇಂದ್ರ ಹಾಗೂ ಪರಿಸರ ಸಂರಕ್ಷಣೆ ಸಲಕರಣೆ ತಯಾರಿಸುವ ಘಟಕ ಸ್ಥಾಪಿಸಲು ಜಂಟಿಯಾಗಿ ₹210 ಮೊತ್ತದ ಬಂಡವಾಳ ಹೂಡಿಕೆ ಮಾಡುವ ಒಪ್ಪಂದಕ್ಕೆ ಸಹಿ ಹಾಕಿವೆ.

ಸುಮಿಟೊಮೊ ಹೆವಿ ಇಂಡಸ್ಟ್ರೀಸ್ (ಎಸ್‌ಎಚ್‌ಐ) ಬೆಂಗಳೂರಿನಲ್ಲಿ ತನ್ನ ಮುಖ್ಯ ಕಚೇರಿಯನ್ನು ತೆರೆಯಲು ಸಜ್ಜಾಗಿದ್ದು, 2024ರ ಅಂತ್ಯಕ್ಕೆ ಉದ್ಘಾಟನೆ ನೆರವೇರಿಸಲು ಉದ್ದೇಶಿಸಿದೆ.

ಈ ತಕ್ಷಣದ ಹೂಡಿಕೆಗಳನ್ನು ಹೊರತುಪಡಿಸಿ, ವಾಹನ ತಯಾರಿಕೆ, ಎಲೆಕ್ಟ್ರಾನಿಕ್ಸ್ ಮತ್ತು ಇಂಧನ ಪರಿಹಾರ ವಲಯಗಳಲ್ಲಿ ₹ 25,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಸಾಧ್ಯತೆಗಳನ್ನೂ ರಾಜ್ಯದ ನಿಯೋಗವು ಗುರುತಿಸಿದೆ. ಈ ಹೂಡಿಕೆ ನಿರೀಕ್ಷೆಯು, ಕರ್ನಾಟಕವು ಜಾಗತಿಕ ಹೂಡಿಕೆದಾರರ ಪಾಲಿಗೆ ಆಕರ್ಷಕ ತಾಣವಾಗಿರುವುದರ ಮಹತ್ವವನ್ನು ಸೂಚಿಸುತ್ತದೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ, ಮೂಲಸೌಕರ್ಯ ಇಲಾಖೆ ಉಪ ಕಾರ್ಯದರ್ಶಿ ಹೆಬ್ಸಿಬಾ ರಾಣಿ ಈ ಸಂದರ್ಭದಲ್ಲಿ ಇದ್ದರು.

BREAKING : ವಾಲ್ಮೀಕಿ ಹಗರಣ ಕೇಸ್ : ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಸಾಧ್ಯತೆ!

ಶ್ರೀಸಾಮಾನ್ಯರ ಕಡೆಗೆ ಸಾಹಿತ್ಯ ನಡಿಗೆ; ಎಲ್.ಎನ್.ಮುಕುಂದರಾಜ್ ಅಭಿಮತ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ವಿಕಲಚೇತನ ಆರೈಕೆದಾರರಿಗೆ’ ಗುಡ್ ನ್ಯೂಸ್ : 1000 ರೂ.ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

06/06/2025 7:25 AM1 Min Read
vidhana soudha

ರಾಜ್ಯ ಸರ್ಕಾರದಿಂದ `ಕಾಡುಗೊಲ್ಲ ಸಮುದಾಯದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.!

06/06/2025 7:22 AM1 Min Read

BIG NEWS : ರಾಜ್ಯ ಸರ್ಕಾರದಿಂದ ‘ಅನರ್ಹ ಪಡಿತರ ಚೀಟಿ’ದಾರರಿಗೆ ಬಿಗ್ ಶಾಕ್ : ಶೀಘ್ರವೇ ಥರ್ಡ್ ಪಾರ್ಟಿ ಸಮೀಕ್ಷೆ.!

06/06/2025 7:13 AM1 Min Read
Recent News

ರಾಜ್ಯ ಸರ್ಕಾರದಿಂದ `ವಿಕಲಚೇತನ ಆರೈಕೆದಾರರಿಗೆ’ ಗುಡ್ ನ್ಯೂಸ್ : 1000 ರೂ.ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

06/06/2025 7:25 AM
vidhana soudha

ರಾಜ್ಯ ಸರ್ಕಾರದಿಂದ `ಕಾಡುಗೊಲ್ಲ ಸಮುದಾಯದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.!

06/06/2025 7:22 AM

BIG NEWS : ರಾಜ್ಯ ಸರ್ಕಾರದಿಂದ ‘ಅನರ್ಹ ಪಡಿತರ ಚೀಟಿ’ದಾರರಿಗೆ ಬಿಗ್ ಶಾಕ್ : ಶೀಘ್ರವೇ ಥರ್ಡ್ ಪಾರ್ಟಿ ಸಮೀಕ್ಷೆ.!

06/06/2025 7:13 AM

BIG NEWS : ರಾಜ್ಯ ಸರ್ಕಾರದಿಂದಲೇ `108 ಆಂಬುಲೆನ್ಸ್ ಕಂಟ್ರೋಲ್‌’ಗೆ ಸಚಿವ ಸಂಪುಟ ಅಸ್ತು.!

06/06/2025 7:06 AM
State News
KARNATAKA

ರಾಜ್ಯ ಸರ್ಕಾರದಿಂದ `ವಿಕಲಚೇತನ ಆರೈಕೆದಾರರಿಗೆ’ ಗುಡ್ ನ್ಯೂಸ್ : 1000 ರೂ.ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

By kannadanewsnow5706/06/2025 7:25 AM KARNATAKA 1 Min Read

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಆಟಿಸಂ, ಬೌದ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣದೋಷ/ದೃಷ್ಟಿದೋಷ)…

vidhana soudha

ರಾಜ್ಯ ಸರ್ಕಾರದಿಂದ `ಕಾಡುಗೊಲ್ಲ ಸಮುದಾಯದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.!

06/06/2025 7:22 AM

BIG NEWS : ರಾಜ್ಯ ಸರ್ಕಾರದಿಂದ ‘ಅನರ್ಹ ಪಡಿತರ ಚೀಟಿ’ದಾರರಿಗೆ ಬಿಗ್ ಶಾಕ್ : ಶೀಘ್ರವೇ ಥರ್ಡ್ ಪಾರ್ಟಿ ಸಮೀಕ್ಷೆ.!

06/06/2025 7:13 AM

BIG NEWS : ರಾಜ್ಯ ಸರ್ಕಾರದಿಂದಲೇ `108 ಆಂಬುಲೆನ್ಸ್ ಕಂಟ್ರೋಲ್‌’ಗೆ ಸಚಿವ ಸಂಪುಟ ಅಸ್ತು.!

06/06/2025 7:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.